ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಕುಸುಮ ಪ್ರಥಮ

0

ಪುತ್ತೂರು : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ದಿಶಾ ಭಾರತ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿಯುಸಿ ವಿದ್ಯಾರ್ಥಿಗಳ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಕುಸುಮ ಸಿ. ಎಂ ಪ್ರಥಮ ಸ್ಥಾನ ಪಡೆದಿದ್ದಾರೆ.

ಪ್ರಬಂಧ ಸ್ಪರ್ಧೆಯು ಸ್ವರಾಜ್ಯ ಆಂದೋಲನ ಮತ್ತು ರಾಷ್ಟ್ರಭಾವ ಜಾಗರಣ ವಿಷಯದ ಕುರಿತು ನಡೆದಿತ್ತು. ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸೆ.24 ರಂದು ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಈಸ್ಟ್ ವೆಸ್ಟ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಭಾಂಗಣದಲ್ಲಿ ನಡೆಯಲಿದೆ. ಈಕೆ ಕುಶಾಲನಗರದ ಹೆಬ್ಬಾಲೆಯ ಮಂಜು ನಾಯಕ್ ಮತ್ತು ಪವಿತ್ರ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here