ಇರ್ದೆ ಬೆಂದ್ರ್ ತೀರ್ಥ ಕ್ಷೇತ್ರಕ್ಕೆ ಅಂತರ್ಜಲ ಭೂವಿಜ್ಞಾನಿ ಭೇಟಿ- ಅಭಿವೃದ್ಧಿಗಾಗಿ ಮಾಹಿತಿ ಸಂಗ್ರಹ

0

ನಿಡ್ಪಳ್ಳಿ; ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರ್ದೆ ಗ್ರಾಮದ ಬೆಂದ್ರ್ ತೀರ್ಥ ಕ್ಷೇತ್ರದ ಅಭಿವೃದ್ಧಿ ಗೊಳಿಸಿ ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿ ಮಾಡುವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂ ವಿಜ್ಞಾನಿ ದಾವೂದ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಭೂ ವಿಜ್ಞಾನಿ ನಾಗಲಿಂಗ ಸ್ವಾಮಿ ಸೆ.20 ರಂದು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.ಅಲ್ಲದೆ ಸ್ಥಳೀಯರಿಂದ ಮತ್ತು ಜನ ಪ್ರತಿನಿಧಿಗಳಿಂದ  ಮಾಹಿತಿಯನ್ನು ಸಂಗ್ರಹಿಸಿದರು.‌
ತಾ‌.ಪಂ‌. ಸಹಾಯಕ ನಿರ್ದೇಶಕರಾದ ಶೈಲಜಾ ಭಟ್, ಬೆಟ್ಟಂಪಾಡಿ ಗ್ರಾ.ಪಂ. ಅಧ್ಯಕ್ಷೆ ಪವಿತ್ರ. ಡಿ,, ಉಪಾಧ್ಯಕ್ಷ ವಿನೋದ್ ಕುಮಾರ್ ರೈ,  ಸದಸ್ಯರಾದ ಪ್ರಕಾಶ್ ರೈ ಬೈಲಾಡಿ, ಚಂದ್ರಶೇಖರ ರೈ ಬಾಲ್ಯೊಟ್ಟು,ಮಾಜಿ ಸದಸ್ಯ ರಕ್ಷಣ್ ರೈ ಬಾಳೆಹಿತ್ಲು,  ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೌಮ್ಯಾ, ಸಿಬ್ಬಂದಿ ಸಂದೀಪ್. ಟಿ, ಊರಿನ ಹಿರಿಯರಾದ ಸುಬ್ರಹ್ಮಣ್ಯ ಭಟ್ ದೇವಕಾನ ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here