ಸೆ.22: ಕುದ್ಮಾರು ಶಾಲೆಯಲ್ಲಿ ತಾ|ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ

0

ಕಾಣಿಯೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ದ.ಕ.ಜಿ.ಪಂ.ಉ.ಹಿ.ಪ್ರಾಥಮಿಕ ಶಾಲೆ ಕುದ್ಮಾರು ಇದರ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟವು ಸೆ.22ರಂದು ಕುದ್ಮಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ ಬೆಳಂದೂರು ಗ್ರಾ.ಪಂ.ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಸುಳ್ಯ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು, ಕುದ್ಮಾರು ಸ.ಉ.ಹಿ.ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ, ನಿವೃತ್ತ ಸಹಾಯಕ ಕ್ರೀಡಾಧಿಕಾರಿ ಮಾಧವ ಬಿ.ಕೆ, ಕುದ್ಮಾರು ಸ್ಕಂದಶ್ರೀ ಯುವಕ ಮಂಡಲದ ಅಧ್ಯಕ್ಷ ದೇವರಾಜ್ ನೂಜಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕುದ್ಮಾರು ಸ.ಉ.ಹಿ.ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗಂಗಾಧರ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಂದೂರು ಗ್ರಾ.ಪಂ.ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ ಬಹುಮಾನ ವಿತರಣೆ ಮಾಡಲಿದ್ದಾರೆ. ಗ್ರಾ.ಪಂ.ಸದಸ್ಯರಾದ ಪ್ರವೀನ್ ಕೆರೆನಾರು, ತಾರಾ ಅನ್ಯಾಡಿ, ರವಿಕುಮಾರ್ ಕೆಡೆಂಜಿ, ಗೀತಾ ಕುವೆತ್ತೋಡಿ, ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ನಿವೃತ್ತ ಮುಖ್ಯಗುರು ಜೂಲಿಯಾನ ಡಿ’ಸೋಜ, ಕುದ್ಮಾರು ತಿರಂಗಾ ವಾರಿಯರ್‍ಸ್‌ನ ಸಂಚಾಲಕ ಲೋಕೇಶ್ ಬಿ.ಎನ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಾಲಾ ಮುಖ್ಯಗುರು ಕುಶಾಲಪ್ಪ ಗೌಡ, ಎಸ್‌ಡಿಎಂಸಿ ಅಧ್ಯಕ್ಷ ಗಂಗಾಧರ ಗೌಡ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here