ಬಡಗನ್ನೂರುಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅವೃದ್ಧಿ ಯೋಜನೆ, ಮತ್ತೂರು ಸ್ತ್ರೀ ಶಕ್ತಿ ಗೊಂಚಲು ಸಮಿತಿ ಸಭೆ ಹಾಗೂ ಪೋಷಣ್ ಅಭಿಯಾನ ಕಾರ್ಯಕ್ರಮ ಮತ್ತು ಮಳೆ ನೀರು ಕೊಯ್ಲು ಘಟಕ ಮತ್ತು ಬೂದು ನೀರು ನಿರ್ವಹಣೆ ಸೌಲಭ್ಯ ಹೊಂದಲು ಪ್ರೇರೆಪಿಸುವ ಕಾರ್ಯಕ್ರಮ ಸೆ. 22 ರಂದು ಬಡಗನ್ನೂರು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗ್ರಾ.ಪಂ ಅಧ್ಯಕ್ಷೆ ಕೆ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಶುಭ ಹಾರೈಸಿದರು. ಈಶ್ವರಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಸುರಕ್ಷಣಾಧಿಕಾರಿ ಲಕ್ಷ್ಮೀ ಪೌಷ್ಟಿಕ ಆಹಾರದ ಮತ್ತು ಪ್ರಯೋಜನಗಳ ಬಗ್ಗೆ ಮಾತನಾಡಿ ಇಲಾಖೆ ಸೌಲಭ್ಯಗಳ ಮಾಹಿತಿ ನೀಡಿದರು. ಜಲಜೀವನ ಮಿಷನ್ ನ ಸಂಪನ್ಮೂಲ ವ್ಯಕ್ತಿ ರವೀಶ್ ಹಾಗೂ ಮಹತೇಶ್ ನೀರು ಉಪಯೋಗ ಮತ್ತು ಅಂತರ್ಜಾಲ ಹೆಚ್ಚಿಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಗೊಂಚಲು ಸಮಿತಿ ಅಧ್ಯಕ್ಷೆ ಶಶಿಕಲಾ ತುಳಸೀಯಡ್ಕ , ಮೆಲ್ವಿಚಾರಕಿ ಸರೋಜಿನಿ, ಈಶ್ವರಮಂಗಲ ಆರೋಗ್ಯ ಕೇಂದ್ರದ ಕಿರಿಯ ಸುರಕ್ಷಣಾಧಿಕಾರಿ ನಂದಿನಿ ಉಪಸ್ಥಿತರಿದ್ದರು.
ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತರು, ಸಹಾಯಕಿ ಹಾಗೂ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಸದಸ್ಯರು ಭಾಗವಹಿಸಿದರು. ಗೊಂಚಲು ಸಮಿತಿ ಖಜಾಂಚಿ ಲತಾಕುಮಾರಿ ಸ್ವಾಗತಿಸಿದರು. ಗೊಂಚಲು ಬಡಗನ್ನೂರು ಪ್ರತಿನಿಧಿ ರೇಖಾ ನಾಗರಾಜ್ ವಂದಿಸಿದರು. ಜತೆ ಕಾರ್ಯದರ್ಶಿ ಪುಷ್ಪಲತಾ ದೇವಕಜೆ ಕಾರ್ಯಕ್ರಮ ನಿರೂಪಿಸಿದರು. ಗ್ರಾ.ಪಂ ಅಧ್ಯಕ್ಷೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.