ಉರಿಮಜಲು: ಬೈಕ್ – ಬೊಲೆರೊ ಮಧ್ಯೆ ಅಪಘಾತ

0

ವಿಟ್ಲ: ಬೊಲೆರೊ ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಮೂವರು ಗಾಯಗೊಂಡ ಘಟನೆ ವಿಟ್ಲ ಪುತ್ತೂರು ರಸ್ತೆಯ ಉರಿಮಜಲಿನಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಪುತ್ತೂರು ಕಡೆಗೆ ತೆರಳುತ್ತಿದ್ದ ಬೊಲೆರೊ ಜೀಪು ನಡುವೆ ಈ ಅಪಘಾತ ಸಂಭವಿಸಿದೆ.

ಬೈಕ್ ನಲ್ಲಿದ್ದ ಕನ್ಯಾನ ನಿವಾಸಿಗಳಾದ ಮಗು ಸಹಿತ ಮೂವರು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಡಿ ಗ್ರೂಪ್ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಬೈಕ್ ಜೀಪಿನಡಿಗೆ ನುಗ್ಗಿದ್ದು, ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

LEAVE A REPLY

Please enter your comment!
Please enter your name here