ಕುದ್ಮಾರು ಶಾಲೆಯಲ್ಲಿ ತಾ| ಮಟ್ಟದ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ

0

  • ಬಾಲಕರ ವಿಭಾಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಪ್ರಥಮ
  •  ಬಾಲಕಿಯರ ವಿಭಾಗದಲ್ಲಿ ಲಿಟ್ಲ್ ಫ್ಲವರ್ ಪುತ್ತೂರು ಪ್ರಥಮ

ಕಾಣಿಯೂರು: ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಆದತೆ ನೀಡಲಾಗುತ್ತಿದೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಮಕ್ಕಳ ಮಾನಸಿಕ ಆರೋಗ್ಯ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳ ಕಲಿಕೆಯ ಗುಣ ಮಟ್ಟ ಹೆಚ್ಚಾಗಲು ಸಾಧ್ಯ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಽಕಾರಿ ಲೋಕೇಶ್ ಎಸ್.ಆರ್ ಹೇಳಿದರು. ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ದ.ಕ.ಜಿ.ಪಂ.ಉ.ಹಿ.ಪ್ರಾಥಮಿಕ ಶಾಲೆ ಕುದ್ಮಾರು ಇದರ ಸಹಯೋಗದೊಂದಿಗೆ ಸೆ 22ರಂದು ಕುದ್ಮಾರು ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳಂದೂರು ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಕ್ರೀಡೆಯಿಂದ ದೇಹದ ಸಾಮರ್ಥ್ಯ ವೃದ್ಧಿಯಾಗುವ ಜತೆಗೆ ಒಬ್ಬ ವ್ಯಕ್ತಿ ಆರೋಗ್ಯದಿಂದಿರಲು ಸಹಾಯ ಮಾಡುತ್ತದೆ. ನಿರಂತರ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ, ದೈಹಿಕ ಸಾಮರ್ಥ್ಯ ವೃದ್ಧಿಯಾಗಲು ಸಹಕಾರಿ, ಮಕ್ಕಳು ಶಿಕ್ಷಣದ ಜತೆಗೆ ಕ್ರೀಡೆಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಸುಳ್ಯ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ನಿವೃತ್ತ ಸಹಾಯಕ ಕ್ರೀಡಾಽಕಾರಿ ಮಾಧವ ಬಿ.ಕೆ, ಕುದ್ಮಾರು ಸ್ಕಂದಶ್ರೀ ಯುವಕ ಮಂಡಲದ ಅಧ್ಯಕ್ಷ ದೇವರಾಜ್ ನೂಜಿ, ಕುದ್ಮಾರು ಸ.ಉ.ಹಿ.ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗಂಗಾಧರ ಗೌಡ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವಿಮಲ್ ಕುಮಾರ್ ನೆಲ್ಯಾಡಿ, ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ಪುತ್ತೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಕುಮಾರ್ ರೈ, ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಾಮಚ್ಚನ್, ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮೋನಪ್ಪ ಗೌಡ ಪಟ್ಟೆ ಉಪಸ್ಥಿತರಿದ್ದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುದ್ಮಾರು ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಮುಖ್ಯಗುರು ಕುಶಾಲಪ್ಪ ಗೌಡ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ಕುಮಾರ್ ವಂದಿಸಿದರು. ಶಿಕ್ಷಕಿಯರಾದ ಶ್ರೀಲತಾ, ವೀಣಾ ಕಾರ್ಯಕ್ರಮ ನಿರೂಪಿಸಿದರು.

ಸಮಾರೋಪ ಸಮಾರಂಭ: ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕುದ್ಮಾರು ಸ.ಉ.ಹಿ.ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗಂಗಾಧರ ಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಳಂದೂರು ಗ್ರಾ.ಪಂ.ಉಪಾಧ್ಯಕ್ಷೆ ತೇಜಾಕ್ಷಿ ಕೊಡಂಗೆ ಬಹುಮಾನ ವಿತರಣೆ ಮಾಡಿದರು. ಗ್ರಾ.ಪಂ.ಸದಸ್ಯರಾದ ಪ್ರವೀಣ್ ಕೆರೆನಾರು, ತಾರಾ ಅನ್ಯಾಡಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಕ್ಷೇತ್ರ ಸಮನ್ವಯಾಽಕಾರಿ ನವೀನ್ ಸ್ಟೀ-ನ್ ವೇಗಸ್, ನಿವೃತ್ತ ಮುಖ್ಯಗುರು ಜೂಲಿಯಾನ ಡಿ’ಸೋಜ, ಕುದ್ಮಾರು ತಿರಂಗಾ ವಾರಿಯರ‍್ಸ್‌ನ ಸಂಚಾಲಕ ಲೋಕೇಶ್ ಬಿ.ಎನ್, ಸಹಾಯಕ ಇಂಜಿನಿಯರ್ ಪ್ರಮೋದ್, ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಾಮಚ್ಚನ್, ಕಡಬ ತಾಲೂಕು ಪ್ರೌಢ ಶಾಲಾ ಶಿಕ್ಷಕರ ಸಂಘದ ಕೋಶಾಽಕಾರಿ ಶ್ರೀಲತಾ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಕಾರ್ಯದರ್ಶಿ ಶೂರಪ್ಪ ಗೌಡ ಪಟ್ಟೆತ್ತಾನ ಶುಭಹಾರೈಸಿದರು. ಕುದ್ಮಾರು ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ಕುಮಾರ್ ಸ್ವಾಗತಿಸಿ, ಶಾಲಾ ಮುಖ್ಯಗುರು ಕುಶಾಲಪ್ಪ ಗೌಡ ವಂದಿಸಿದರು, ಶಿಕ್ಷಕಿ ಸುಜಾತ ಅಬೀರ ಕಾರ್ಯಕ್ರಮ ನಿರೂಪಿಸಿದರು.

ಲೋಕೇಶ್ ಬಿ.ಎನ್ ಬರೆಪ್ಪಾಡಿಯವರಿಗೆ ಸನ್ಮಾನ

ಕುದ್ಮಾರು ಸ.ಉ.ಹಿ.ಪ್ರಾಥಮಿಕ ಶಾಲಾ ಕ್ರೀಡಾಂಗಣದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಕುದ್ಮಾರು ತಿರಂಗಾ ವಾರಿಯರ‍್ಸ್ ಸಂಚಾಲಕ ಲೋಕೇಶ್ ಬಿ.ಎನ್ ಬರೆಪ್ಪಾಡಿ ಅವರನ್ನು ಸನ್ಮಾನಿಸಲಾಯಿತು.

ಕುದ್ಮಾರು ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಪುತ್ತೂರು ಬಲ್ನಾಡು ಮೋರಾರ್ಜಿ ದೇಸಾಯಿ ವಸತಿ ಶಾಲೆ ಪ್ರಥಮ ಸ್ಥಾನ ಪಡೆದುಕೊಂಡರೆ, ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಪುತ್ತೂರು ಲಿಟ್ಲ್ -ವರ್ ವಿದ್ಯಾಸಂಸ್ಥೆ ಪ್ರಥಮ ಸ್ಥಾನ ಪಡೆದುಕೊಂಡರೆ, ಕೊಣಾಜೆ ಉ.ಹಿ.ಪ್ರಾಥಮಿಕ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿತು.

LEAVE A REPLY

Please enter your comment!
Please enter your name here