ಬಡಗನ್ನೂರು: ದ. ಕ. ಜಿಲ್ಲಾ ಪಂಚಾಯತ್ ಮಂಗಳೂರು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು ಹಾಗೂ
ಗ್ರಾಮ ಪಂಚಾಯತ್ ಬಡಗನ್ನೂರು ಇವರ ಸಂಯುಕ್ತ ಆಶ್ರಯದಲ್ಲಿ ನಾಯಿಗಳಿಗೆ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರವು ಸೆ. 24 ರಂದು ಪೂರ್ವಾಹ್ನ ಗಂಟೆ 9-30ಕ್ಕೆ ಗ್ರಾ ಪಂ ಸಭಾಂಗಣದಲ್ಲಿ ನಡೆಯಲಿದೆ. ಬಳಿಕ 4 ತಂಡಗಳ ಮೂಲಕ ಗ್ರಾ.ಪಂ ವ್ಯಾಪ್ತಿಯ 20 ಕೇಂದ್ರಗಳಲ್ಲಿ ಮಧ್ಯಾಹ್ನ 1 ಗಂಟೆಯ ತನಕ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ. ಗ್ರಾಮಸ್ಥರು ತಮ್ಮ ಸಾಕು ನಾಯಿಗಳನ್ನು ಸಮೀಪದ ಕೇಂದ್ರಕ್ಕೆ ತಂದು ಲಸಿಕೆ ಹಾಕಿಸಿಕೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.