ಕೇಪು: ಬೈಕ್ – ಪಿಕಪ್ ಮಧ್ಯೆ ಅಪಘಾತ – ಬೈಕ್ ಸವಾರ ಮೃತ್ಯು

0

ವಿಟ್ಲ: ಬೈಕ್ ಹಾಗೂ ಪಿಕಪ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೇಪು ಸಮೀಪದ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬದಿಯಡ್ಕ ನಿವಾಸಿ ಸಂದೇಶ್ (33 ವ.) ಮೃತ ದುರ್ದೈವಿಯಾಗಿದ್ದಾರೆ.


ಸಂದೇಶ್ ವೃತ್ತಿಯಲ್ಲಿ ವಾಹನ ಚಾಲಕನಾಗಿದ್ದು,ಹವ್ಯಾಸಿ ಗಾಯಕನಾಗಿದ್ದಾರೆ. ಬಿಜೆಪಿ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಅವರು ಸೆ.23೩ರಂದು ಸಾಯಂಕಾಲ ವಿಟ್ಲ ಕಡೆಯಿಂದ ಬೈಕ್ ನಲ್ಲಿ ಬದಿಯಡ್ಕ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಎದುರಿನಿಂದ ಬಂದ ಪಿಕಪ್  ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here