ಕಬಡ್ಡಿ ಪಂದ್ಯಾಟ-ಲಿಟ್ಲ್ ಪ್ಲವರ್ ಹಿ.ಪ್ರಾ ಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು:ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇದರ ಸಹಯೋಗದಿಂದ ಸೆ.22ರಂದು ಕುದ್ಮಾರು ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಕ್ರೀಡಾಪಟುಗಳಿಗೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ. ವೆನಿಶಾ ಬಿ. ಎಸ್, ಶಿಕ್ಷಕಿ ಭಗಿನಿ. ವಿನೀತಾ ಪಿರೇರ, ಶಿಕ್ಷಕಿ ವಿಲ್ಮಾ ಫರ್ನಾಂಡಿಸ್, ಭಗಿನಿ. ಡೈನ ಸಿಕ್ವೇರಾ ಮಾರ್ಗದರ್ಶನದಲ್ಲಿ ಶಾಲಾ ಸಹಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ತರಬೇತಿ ನೀಡಿರುತ್ತಾರೆ. ಇವರು ಸೆ.26ರಂದು ಬೆಳ್ತಂಗಡಿಯ ಪದಂಗಡಿ ಹಿ.ಪ್ರಾ ಶಾಲೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here