ತೆಂಕಿಲ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ

0

ಪುತ್ತೂರು: ತೆಂಕಿಲ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ವತಿಯಿಂದ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ಸೆ.23ರಂದು ನಡೆಯಿತು.
ಬಾಲವಿಕಾಸ ಸಮಿತಿ ಅಧ್ಯಕ್ಷೆ ರೇವತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಕೇಶವ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಜಲಜಾಕ್ಷಿ ಅವರು ಪೌಷ್ಠಿಕ ಆಹಾರದ ಕುರಿತು ಮಾಹಿತಿ ನೀಡಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿ ಕಾನೂನು ಮಾಹಿತಿ ನೀಡಿದರು. ‌

ವೇದಿಕೆಯಲ್ಲಿ ನ್ಯಾಯವಾದಿಗಳಾದ ರಾಜೇಶ್ವರಿ, ಅಶ್ವಿನಿ ರೈ, ಲಯನ್ಸ್ ಕ್ಲಬ್ ಸದಸ್ಯೆ ಶಾರದಾ ಕೇಶವ್, ಸಮುದಾಯ ಆರೋಗ್ಯ ಸಹಾಯಕಿ ಸುನಂದ, ಅಂಗನವಾಡಿ ಕಾರ್ಯಕರ್ತೆ ಪಾರ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಾಲವಿಕಾಸ ಸಮಿತಿ ಸದಸ್ಯ ಅನಿಲ್ ಅನಿಸಿಕೆ ವ್ಯಕ್ತಪಡಿಸಿದರು. ಸಮಿತಿ ಸದಸ್ಯರು, ಪೋಷಕರು ಮತ್ತಿತರರ ಉಪಸ್ಥಿತರಿದ್ದರು. ಪೌಷ್ಠಿಕ ಆಹಾರ ತಯಾರಿಸಿದವರಿಗೆ ಪ್ರೋತ್ಸಾಹಕ ಬಹುಮಾನ ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಪಾರ್ವತಿ ಸ್ವಾಗತಿಸಿ, ಭವ್ಯ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.

LEAVE A REPLY

Please enter your comment!
Please enter your name here