ಕಾಣಿಯೂರು: ಉಚಿತ ಅಭಾ ಕಾರ್ಡ್ ಅಭಿಯಾನ

0

ಕಾಣಿಯೂರು: ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಉಚಿತ ಅಭಾ ಕಾರ್ಡ್ ಅಭಿಯಾನ ಕಾಣಿಯೂರು ಗ್ರಾಮ ಪಂಚಾಯತ್ ಮತ್ತು ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ವತಿಯಿಂದ ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಚಾರ್ವಾಕ ಮುದುವ ಪ್ರಾಥಮಿಕ ಅರೋಗ್ಯ ಉಪ ಕೇಂದ್ರದಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸು, ಉಪಾಧ್ಯಕ್ಷರಾದ ಗಣೇಶ್ ಉದನಡ್ಕ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಪುತ್ತೂರು ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ದೇವಯ್ಯ ಗೌಡ ಖಂಡಿಗ, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಅರ್ಚಕ ವೆಂಕಟಕೃಷ್ಣ ಭಟ್, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಾಜಿದಾ ಮತ್ತೀರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here