ದ.ಕ.ಜಿಲ್ಲೆಯಲ್ಲಿ ಸೆ.28ರಿಂದ ಅ.16ರವರೆಗೆ ದಸರಾ ರಜೆ ನಿಗದಿಪಡಿಸಿ ಡಿಸಿ ಆದೇಶ

0

 

ಪುತ್ತೂರು : ದ.ಕ.ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸೆ.28ರಿಂದ ಅ.16ರವರೆಗೆ ಹೆಚ್ಚುವರಿ 4ದಿನ ದಸರಾ ರಜೆ ನಿಗದಿಪಡಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರರವರು ಆದೇಶ ಹೊರಡಿಸಿದ್ದಾರೆ.

2022-23ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳನ್ನು ನಿಗದಿಪಡಿಸಿದ ಮಾರ್ಗಸೂಚಿಯಂತೆ ಶಾಲೆಗಳಿಗೆ ದಸರಾ ರಜೆಯನ್ನು ಅ.3ರಿಂದ 16ರವರೆಗೆ ನಿಗದಿಸಲಾಗಿತ್ತು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಅನುಮೋದನೆಯನ್ವಯ ಸರ್ಕಾರವು ಆದೇಶಿಸಿರುವಂತೆ ಮಂಗಳೂರು ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.16ರವರೆಗೆ 4ದಿನ ಹೆಚ್ಚುವರಿಯಾಗಿ ಪರಿತ್ತಿಗೊಳಪಟ್ಟು ನೀಡಲಾಗಿತ್ತು. ಇದಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಮನವಿಗಳನ್ನು ಪರಿಗಣಿಸಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಸೂಚನೆಯಂತೆ ದ.ಕ.ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.16ರವರೆಗೆ 4ದಿನ ಹೆಚ್ಚುವರಿಯಾಗಿ ಕೆಲವು ಪರತ್ತಿಗೊಳಪಟ್ಟು ವಿಸ್ತರಿಸಿ ಆದೇಶಿಸಲಾಗಿದೆ.
ಷರತ್ತುಗಳು: ಅ.02ರಂದು ಮಹಾತ್ಮಗಾಂದಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸುವುದು. ಹೆಚ್ಚುವರಿಯಾಗಿ ನೀಡಿರುವ 04 ದಿನಗಳ ರಜೆಯನ್ನು ನವೆಂಬರ್-2022ರ ತಿಂಗಳಿನಲ್ಲಿ ನಾಲ್ಕು ಶನಿವಾರ ಪೂರ್ಣದಿನದ ತರಗತಿಗಳನ್ನು ಹಾಗೂ ಎರಡು ಭಾನುವಾರು ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ಸರಿದೂಗಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here