‘ಭಾರತ್ ಜೋಡೋ’ ಭಾರತ ಐಕ್ಯತಾ ಯಾತ್ರೆಯ ಸಂಯೋಜಕಿ ದಿವ್ಯಪ್ರಭಾ ಗೌಡರವರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ

0

ರಾಜ್ಯ ಪ್ರವೇಶಿಸಲಿರುವ ಭಾರತ್ ಜೋಡೋ ಯಾತ್ರೆಯ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚೆ

ಪುತ್ತೂರು: ‘ಭಾರತ್ ಜೋಡೋ’ ಭಾರತ ಐಕ್ಯತಾ ಯಾತ್ರೆಯ ಸಂಯೋಜಕರಾದ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರು ಸೆ.25ರಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರು ಸದಾಶಿವ ನಗರದಲ್ಲಿರುವ ಡಿಕೆಶಿ ನಿವಾಸದ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ ಸೆ.30ರಂದು ಕರ್ನಾಟಕಕ್ಕೆ ಪ್ರವೇಶಿಸಲಿದ್ದು ಆ ಪ್ರಯುಕ್ತ ಯಾತ್ರೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವ ಕುರಿತು ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here