ಉಪ್ಪಿನಂಗಡಿ: 2022-23ನೇ ಸಾಲಿನ ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ವಿದ್ಯಾರ್ಥಿ ಯುವ ಸಂಸತ್ ಸ್ಪರ್ಧೆ ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮವನ್ನು ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ಎನ್. ಉಮೇಶ್ ಶೆಣೈ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಹರಿಪ್ರಸಾದ್ ಕಾರ್ಯಕ್ರಮಕ್ಕೆ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ರಾಮಚಂದ್ರ ಮಣಿಯಾಣಿ, ಜೆ.ಕೆ. ಪೂಜಾರಿ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಶ್ಯಾಮಲಾ ಉಪಸ್ಥಿತರಿದ್ದರು.
ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಶ್ರೀಧರ್ ಭಟ್ ಸ್ವಾಗತಿಸಿ, ಶಿಕ್ಷಕಿ ಶೋಭಾ ವಂದಿಸಿದರು. ಶಿಕ್ಷಕರಾದ ವಿಜಯಕುಮಾರ್, ಸುಮಾ, ವಿಜಯಕುಮಾರ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಗುಡ್ಡಪ್ಪ ಬಲ್ಯ ಕಾರ್ಯಕ್ರಮ ನಿರೂಪಿಸಿದರು.