ಭಕ್ತಕೋಡಿ: ಚಿಗುರು ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಕ್ತಕೋಡಿ ಕಾರ್ಯಕ್ಷೇತ್ರದಲ್ಲಿ ‘ಚಿಗುರು’ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಸೆ.೨೫ರಂದು ಭಕ್ತಕೋಡಿಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಶ್ರೀ ಗೌರಿ ಮಹಿಳಾ ಮಂಡಲದ ಗೌರವಾಧ್ಯಕ್ಷೆ ರತ್ನಾವತಿ ಸಭಾಧ್ಯಕ್ಷತೆ ವಹಿಸಿದ್ದರು.


ಮಂಡೂರು ಗ್ರಾ.ಪಂ ಸದಸ್ಯ ಕಮಲೇಶ್ ಎಸ್.ವಿ ಉದ್ಘಾಟಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಅಶ್ವಿನಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಒಕ್ಕೂಟದ ಅಧ್ಯಕ್ಷ ಶಶಿಧರ್ ಎಸ್.ಡಿ, ಸರ್ವೆ ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಗೌತಮ್‌ರಾಜ್ ಕರುಂಬಾರು ಅಥಿತಿಗಳಾಗಿ ಭಾಗವಹಿಸಿದ್ದರು. ಕೇಂದ್ರದ ಸಂಯೋಜಕಿ ಕುಶಾಲರವರು ಕಾರ್ಯಕ್ರಮ ನಿರೂಪಿಸಿದರು. ರಜನಿ ಸ್ವಾಗತಿಸಿದರು. ಸೇವಾಪ್ರತಿನಿಧಿ ಚಿತ್ರಾ ವಂದಿಸಿದರು.

LEAVE A REPLY

Please enter your comment!
Please enter your name here