





ನಿಡ್ಪಳ್ಳಿ; ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಇರ್ದೆ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ ಸೆ.26 ರಂದು ದೀಪ ಬೆಳಗಿಸಿ ಉದ್ಘಾಟಿಸಿ ಚಾಲನೆ ನೀಡಿದರು. ಬೆಳಿಗ್ಗೆ ಮಹಾಗಣಪತಿ ಹೋಮ, ದೇವರಿಗೆ ಪಂಚವಿಂಶತಿ ಕಲಶ ನಡೆಯಿತು.









ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ ಮಂದಾರಗಿರಿ ಇವರಿಂದ ಭಜನಾ ಕಾರ್ಯಕ್ರಮ ನಡೆದು ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.ಸಂಜೆ ಶಿವರಾಮ ನಿಡ್ಪಳ್ಳಿ ಮತ್ತು ಬಳಗದವರಿಂದ ಸ್ಯಾಕ್ಸೋಫೋನ್ ವಾದನ ನಡೆಯಿತು. ರಾತ್ರಿ ಕ್ಷೇತ್ರದ ತಂತ್ರಿಗಳಾದ ದೇಲಂಪಾಡಿ ಶ್ರೀ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಸಾಮೂಹಿಕ ವಿಶೇಷ ರಂಗಪೂಜೆ ನಡೆದು ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ , ನಿಕಟ ಪೂರ್ವ ಅಧ್ಯಕ್ಷ ನಾಗೇಶ ಗೌಡ ಮತ್ತು ಸದಸ್ಯರು ಸೇರಿದಂತೆ ಸುಮಾರು 500 ಭಕ್ತಾದಿಗಳು ಪಾಲ್ಗೊಂಡರು.








