ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ 2022-23 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಸೆ.29ರಂದು ಬೆಳಿಗ್ಗೆ ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಲಿದೆ. ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮಸಭೆಗೆ ಸಹಕಾರ ಇಲಾಖೆಯ ಸಹಾಯಕ ನಿಬಂಧಕರು ಮಾರ್ಗದರ್ಶಿ ಅಧಿಕಾರಿಯಾಗಿ ಆಗಮಿಸಲಿದ್ದಾರೆ. ಸಭೆಯಲ್ಲಿ ವಿವಿಧ ಇಲಾಖೆಗಳ ಮಾಹಿತಿ, ನಿವೇಶನ ರಹಿತರ ಹಾಗೂ ವಸತಿ ರಹಿತರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ತೆಗೆಯುವ ಬಗ್ಗೆ ಅಲ್ಲದೆ ಸಾರ್ವಜನಿಕರಿಂದ ಅರ್ಜಿ ಸ್ವೀಕಾರ ಇತ್ಯಾದಿ ನಡೆಯಲಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷೆ ಸುಂದರಿ, ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್, ಕಾರ್ಯದರ್ಶಿ ಜಯಂತಿ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.