ಕಾಣಿಯೂರು ಪ್ರಗತಿಯ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕರವರಿಗೆ ‘ಯೋಗಿ ಯೋಗ ಪ್ರಶಸ್ತಿ’

0

ಕಾಣಿಯೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ನಿರಂತರ ಯೋಗ ಶಿಕ್ಷಣ ಕೇಂದ್ರ, ಕಾಬೆಟ್ಟು ಇದರ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ಸಾಧಕರ ಮತ್ತು ರಾಷ್ಟ್ರೀಯ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಗಳ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಯೋಗ ಗುರು ಶರತ್ ಮರ್ಗಿಲಡ್ಕ ಅವರಿಗೆ ಯೋಗಿ ಯೋಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಯೋಗಾಸನದಲ್ಲಿ ಮಾಡಿದ ವೈಯುಕ್ತಿಕ ಸಾಧನೆ ಮತ್ತು ಯೋಗ ದಲ್ಲಿ ವಿದ್ಯಾರ್ಥಿಗಳ ಸಾಧನೆಯನ್ನು ಗಮನಿಸಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

LEAVE A REPLY

Please enter your comment!
Please enter your name here