ಪುತ್ತೂರು: ಲೋಕ ಕಲ್ಯಾಣಕ್ಕಾಗಿ ನವರಾತ್ರಿಯ ಲಲಿತಾ ಪಂಚಮಿಯಂದು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಹಿಂದೂ ಮಹಿಳೆಯರ ಸಮ್ಮುಖದಲ್ಲಿ ಸಾಮೂಹಿಕವಾಗಿ ಕುಂಕುಮಾರ್ಚನೆ ನಡೆಸಲು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದಂತೆ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ.30ರಂದು ಸಂಜೆ ಗಂಟೆ.4.45ಕ್ಕೆ ಲಲಿತಾ ಸಹಸ್ರನಾಮ ಮತ್ತು ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ಜರುಗಲಿದೆ.
ಸೆ.30ರ ಶುಕ್ರವಾರ ಲಲಿತಾ ಪಂಚಮಿ ವಿಶೇಷವಾಗಿದ್ದು, ಈ ದಿನದಂದು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಸಾಮೂಹಿಕವಾಗಿ ಹಿಂದೂ ಮಹಿಳೆಯರನ್ನು ಬರಮಾಡಿಕೊಂಡು ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಕುಂಕುಮಾರ್ಚನೆಯನ್ನು ಲೋಕ ಕಲ್ಯಾಣಕ್ಕಾಗಿ ಕುಂಕುಮಾರ್ಚನೆಯನ್ನು ಅರ್ಚಕರ ಮೂಲಕ ಎರಡು ಪಾಳಿಯಲ್ಲಿ ನೆರವೇರಿಸುವಂತೆ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದರು. ಅದೇ ರೀತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈಗಾಗಲೇ ಲಲಿತ ಸಹಸ್ರನಾಮ ಮತ್ತು ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ನಡೆಯುತ್ತಿದ್ದು, ಇದೀಗ ಸಚಿವರ ಆದೇಶ ಕಾರ್ಯಕ್ರಮಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.