ಪುತ್ತೂರು ಕೆಪಿ ಕಾಂಪ್ಲೆಕ್ಸ್ ನಲ್ಲಿರುವ ಪಿಎಫ್ಐ ಕಚೇರಿಗೆ ಬೀಗ ಮುದ್ರೆ !

0

ಪುತ್ತೂರು: ದೇಶ ವಿರೋಧಿ ಚಟುವಟಿಕೆ ಆರೋಪದ ಹಿನ್ನಲೆಯಲ್ಲಿ ದೇಶಾದಾದ್ಯಂತ ಪಿಎಫ್ಐ ಸಂಘಟನೆಯನ್ನು 5 ವರ್ಷಗಳ ಕಾಲ ನಿಷೇಧ ಮಾಡಿದ ಕೇಂದ್ರ ಗೃಹ ಇಲಾಖೆಯ ಆದೇಶದಂತೆ ಪಿಎಫ್ಐ ಕಚೇರಿಗಳಿಗೆ ಬೀಗ ಮುದ್ರೆ ಹಾಕಲಾಗುತ್ತಿದ್ದು, ಸೆ.28 ರ ತಡ ರಾತ್ರಿ 1 ಗಂಟೆ ಸುಮಾರಿಗೆ ಪುತ್ತೂರು ಮುಖ್ಯರಸ್ತೆ ಕೆಪಿ ಕಾಂಪ್ಲೆಕ್ಸ್ ನಲ್ಲಿರುವ ಪಿಎಫ್ಐ ಕಚೇರಿಗೂ ಬೀಗ ಮುದ್ರೆ ಹಾಕಲಾಗಿದೆ.

ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್, ಕಂದಾಯ ಅಧಿಕಾರಿಗಳು ಪೊಲೀಸರ ಬಂದೋಬಸ್ತ್ ನಲ್ಲಿ ಪಿಎಫ್ಐ ಕಚೇರಿ ಬೀಗ ಒಡೆದು ಒಳಗಿದ್ದ ಕಂಪ್ಯೂಟರ್, ಕಾಗದ ಪತ್ರಗಳನ್ನು ವಶಕ್ಕೆ ಪಡೆದು ಬೀಗಮುದ್ರೆ ಹಾಕಿದ್ದಾರೆ.

LEAVE A REPLY

Please enter your comment!
Please enter your name here