ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಕನ್ನಡ ಭುವನೇಶ್ವರಿಯ ಮೆರವಣಿಗೆಗೆ ಚಾಲನೆ

0

ಪುತ್ತೂರು: ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದವತಿಯಿಂದ ಪುತ್ತೂರು ತಾಲೂಕು ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನ ಸೆ.೨೯ರಂದು ಬಪ್ಪಳಿಗೆ ಅಂಬಿಕಾ ಸಮೂಹ ಸಂಸ್ಥೆಗಳ ಆವರಣದಲ್ಲಿ ರಾಷ್ಟ್ರಧ್ವಜ, ಕನ್ನಡ ಪರಿಷತ್ತು ಧ್ವಜ ಮತ್ತು ಸಮ್ಮೇಳನದ ಧ್ವಜಾರೋಹಣದ ಮೂಲಕ ಅದ್ದೂರಿಯ ಚಾಲನೆ ನೀಡಿದ ಬಳಿಕ ಮಧ್ಯಾಹ್ನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದದಿಂದ ಕನ್ನಡ ಭುವನೇಶ್ವರಿಯ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ದೀಪ ಪ್ರಜ್ವಲನೆ ಮಾಡಿದರು. ಗಣ್ಯರು ಪುಷ್ಪಾರ್ಚನೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ನಾಡೋಜ ಡಾ| ಮಹೇಶ್ ಜೋಷಿ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ| ಎಂ.ಪಿ.ಶ್ರೀನಾಥ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತೆಂಗಿನ ಕಾಯಿ ಒಡೆಯುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ರಾಜಶ್ರೀ ನಟ್ಟೋಜ, ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷರಾಗಿರುವ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಿ.ಐತ್ತಪ್ಪ ನಾಯ್ಕ್, ಸದಸ್ಯರಾದ ರವಿಂದ್ರನಾಥ ರೈ ಬಳ್ಳಮಜಲು, ರಾಮದಾಸ್ ಗೌಡ, ರಾಮಚಂದ್ರ ಕಾಮತ್, ಡಾ. ಸುಧಾ ಎಸ್ ರಾವ್, ಬಿ.ಕೆ.ವೀಣಾ, ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, ನಗರಸಭಾ ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ನಲ್ಕಗೋಪಾಲಕೃಷ್ಣ ಆಚಾರ್ಯ, ಪತ್ರಕರ್ತ ಉದಯ ಯು.ಎಲ್, ಟಿ.ನಾರಾಯಣ ಭಟ್, ಸರೋಜಿನಿ ಮೇನಾಲ, ಅಂಬಿಕಾ ಸಮೂಹ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ, ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here