ಪೋಳ್ಯದಲ್ಲಿ ಹಣ್ಣಿನ ಅಂಗಡಿಗೆ ನುಗ್ಗಿದ ಕಾರು.!!

0

ಪುತ್ತೂರು; ಮಾಣಿ-ಮೈಸೂರು ಹೆದ್ದಾರಿಯ ಕಬಕ ಗ್ರಾ.ಪಂ ವ್ಯಾಪ್ತಿಯ ಪೋಳ್ಯ ಎಂಬಲ್ಲಿ ಚಾಲಕ‌ನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ್ಟ್ ಡಿಸೈರ್ ಕಾರೊಂದು ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಗೆ ನುಗ್ಗಿದ ಘಟನೆ ಸೆ.29ರಂದು ನಡೆದಿದೆ. 

ಮಂಗಳೂರು ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯಲ್ಲಿದ್ದ ಹಣ್ಣಿನ ಅಂಗಡಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಬ್ಬು ಜ್ಯೂಸ್ ಅಂಗಡಿಗೂ ಹಾನಿಯುಂಟಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here