ಪುತ್ತೂರು ದಸರಾ ಮಹೋತ್ಸವದಲ್ಲಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ, ಸಾಧಕರಿಗೆ ಗೌರವ

0

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿಯಿಂದ ೨೦ನೇ ವರ್ಷದ ಪುತ್ತೂರು ದಸರಾ ಮಹೋತ್ಸವವು ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆಯುತ್ತಿದ್ದು, ಸೆ.೨೮ರಂದು ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಮತ್ತು ಸಾಧಕರಿಗೆ ಗೌರವ ಕಾರ್ಯಕ್ರಮ ನಡೆಯಿತು.

ಸಮಾಜ ಸೇವೆಯಲ್ಲಿರುವ ಆನಂದ ಆಶ್ರಮದ ಅಧ್ಯಕ್ಷೆ ಡಾ. ಗೌರಿ ಪೈ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯಗುರು ಆಶಾ ಬೆಳ್ಳಾರೆ, ಉತ್ತಮ ಅಧಿಕಾರಿಯಾಗಿ ಗುರುತಿಸಲ್ಪಟ್ಟ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರನ್ನು ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ತಾಲೂಕಿನ ೧೨೦ ಮಂದಿ ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು. ಪುತ್ತೂರು ದಸರಾ ಮಹೋತ್ಸವ ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರು ಆಶಾ ಕಾರ್ಯಕರ್ತೆಯರನ್ನು ಗೌರವಿಸಿದರು. ಪುತ್ತೂರು ದಸರಾ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ನಾಕ್ ಪರ್ಲಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುತ್ತೂರು ದಸರಾ ಮಹೋತ್ಸವ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ವಂದಿಸಿದರು. ಸಂಘಟನಾ ಕಾರ್ಯದರ್ಶಿಗಳಾದ ರಾಜೇಶ್ ಬನ್ನೂರು, ಜಯಂತ ಶೆಟ್ಟಿ ಕಂಬಳತ್ತಡ್ಡ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here