ಇಡ್ಕಿದು ಸೇವಾ ಸಹಕಾರಿ ಸಂಘಕ್ಕೆ ದ.ಕ ಕೃಷಿ ಅಭಿವೃದ್ಧಿ ಸಹಕಾರಿ ಸಂಘದಿಂದ ಪ್ರಶಸ್ತಿ

ವಿಟ್ಲ: 2021-22ನೇ ಸಾಲಿನಲ್ಲಿ ಅತ್ಯಧಿಕ ವ್ಯವಹಾರ ನಡೆಸಿರುವ ಹಿನ್ನೆಲೆಯಲ್ಲಿ ಇಡ್ಕಿದು ಸೇವಾಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ವತಿಯಿಂದ ಪ್ರಶಸ್ತಿ ಲಭಿಸಿದೆ. ಮಂಗಳೂರಿನಲ್ಲಿ ನಡೆದ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷರಾದ ರವೀಂದ್ರ ಕಂಬಳಿರವರು ಪ್ರಶಸ್ತಿ ಪ್ರಧಾನ ಮಾಡಿದರು.

ಇಡ್ಕಿದು ಸೇವಾಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ ಶೆಟ್ಟಿ ಬೀಡಿನಮಜಲು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ನಾಯ್ಕ್ ರವರು ಪ್ರಶಸ್ತಿಯನ್ನು ಪಡೆದುಕೊಂಡರು. ದ.ಕ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ನಿರ್ದೇಶಕರುಗಳಾದ ಎಸ್.ಬಿ.ಜಯರಾಮ ರೈ, ರಾಜಶೇಖರ್ ಜೈನ್, ಪಿ.ಸಿ ಜಯರಾಮ ಸಹಿತ ನಿರ್ದೇಶಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.