ಭೂತಾನ್‌ನಿಂದ ಅಡಿಕೆ ಆಮದಿಗೆ ಕೇಂದ್ರ ಅನುಮತಿ

0

ಅಡಿಕೆ ಬೆಳೆಗಾರರು ಆತಂಕ ಪಡಬೇಕಾಗಿಲ್ಲ-ಕೊಡ್ಗಿ

ಪುತ್ತೂರು : ಕೇಂದ್ರ ಸರಕಾರವು ಸೆ.28ರಂದು DGT ಮೂಲಕ ಹೊರಡಿಸಿರುವ ಅಧಿಸೂಚನೆಯಲ್ಲಿ, ಭೂತನ್‌ನಿಂದ 17000 ಟನ್ ಹಸಿ ಅಡಿಕೆ ಆಮದಿಗೆ ಅನುಮತಿ ನೀಡಿದ್ದು ಇದರಿಂದ ಕರ್ನಾಟಕ ಮತ್ತು ಕೇರಳ ರಾಜ್ಯದ ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯ ಇಲ್ಲ ಇದು ನಮ್ಮಲ್ಲಿನ ಅಡಿಕೆಯ ದರದ ಸ್ಥಿರತೆಗೆ ಯಾವುದೇ ಪರಿಣಾಮ ಉಂಟುಮಾಡುವುದಿಲ್ಲ. ಇದರಿಂದ ದೇಶೀಯ ಗುಣಮಟ್ಟದ ಚಾಲಿಗೆ ಯಾವುದೇ ತೊಂದರೆ ಇಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೊರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ. ಕೇಂದ್ರ ಸರಕಾರವು ಹೊರಡಿಸಿರುವ ಅಽಸೂಚನೆಗೆ ಕ್ಯಾಂಪ್ಕೊ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ಯಾಂಪ್ಕೊ ಪತ್ರದ ಮೂಲಕ ವಿರೋಧ ವ್ಯಕ್ತಪಡಿಸಿದೆ. ಆಮದು ಆಗುವ ಚಾಲಿ ಅಡಿಕೆಗೆ ಕೆ.ಜಿ.ಗೆ 360ರೂ. ಕನಿಷ್ಠ ಆಮದು ಬೆಲೆ ನಿಗದಿ ಪಡಿಸುವಂತೆ ಕ್ಯಾಂಪ್ಕೋ ದೆಹಲಿ ನಿಯೋಗದ ಮೂಲಕ ಈಗಾಗಲೇ ಕೇಂದ್ರ ಸರಕಾರವನ್ನು ಒತ್ತಾಯಿಸಿದೆ. ಈ ಅಧಿಸೂಚನೆಯ ಅನುಷ್ಠಾನದಿಂದ ದೇಶೀಯ ಮಾರುಕಟ್ಟೆಗೆ ಯಾವುದೇ ತೊಂದರೆ ಇಲ್ಲದಿದ್ದರೂ ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷೆಯಂತೆ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರದ ಸಮಗ್ರ ನೀತಿಗೆ ವ್ಯತಿರಿಕ್ತ ಪರಿಣಾಮ ಬೀರುವ ಕುರಿತು ವಾಣಿಜ್ಯ ಸಚಿವರಿಗೆ ಕ್ಯಾಂಪ್ಕೋ ಆತಂಕ ವ್ಯಕ್ತಪಡಿಸಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರವು ರೈತರ ಹಿತ ಕಾಪಾಡಲು ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಕ್ಯಾಂಪ್ಕೋ ಆಶಾಭಾವನೆ ಹೊಂದಿದೆ ಎಂದು ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here