ಪುತ್ತೂರು; ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 162 ಜಯಂತಿಯ ಅಂಗವಾಗಿ ಅ.2ರಂದು ಬಸ್ ನಿಲ್ದಾಣದ ಬಳಿಯಿರುವ ಗಾಂಧೀಕಟ್ಟೆಯಲ್ಲಿ ಗಾಂಧೀ ಜಯಂತಿ ಆಚರಣೆ ನಡೆಯಲಿದೆ.
ಶಾಸಕ ಸಂಜೀವ ಮಠಂದೂರು, ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ನಿಸರ್ಗ ಪ್ರಿಯ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ನಗರ ಸಭಾ ಪೌರಾಯುಕ್ತ ಮಧು ಎಸ್ ಮನೋಹರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಗಾಂಧೀ ಕಟ್ಟೆ ಸಮಿತಿ ಸಂಚಾಲಕ, ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ಜತೆ ಕಾರ್ಯದರ್ಶಿ ಸಯ್ಯದ್ ಕಮಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.