ಆರ್ಯಾಪು : ಪೋಷನ್ ಮಾಸಾಚರಣೆ ಅಂಗವಾಗಿ ಬಾಲಭಟ್ಟ ಕಾರ್ಯಕ್ರಮ

0

ಪುತ್ತೂರು: ಪೋಷನ್ ಮಾಸಾಚರಣೆ ಅಂಗವಾಗಿ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಆರ್ಯಾಪು ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನದ ಆವರಣದಲ್ಲಿ ಬಾಲಭಟ್ಟ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸರಸ್ವತಿ ಯವರ ಅಧ್ಯಕ್ಷತೆಯಲ್ಲಿ ಸೆ.29 ರಂದು ನಡೆಯಿತು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಬಾಲಭಟ್ಟ ಕಾರ್ಯಕ್ರಮದ ಉದ್ದೇಶದ ಬಗ್ಗೆ ತಿಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬಳಿಕ ಅಂಗನವಾಡಿ ಮಕ್ಕಳಿಗೆ ಬೆಂಕಿ ಇಲ್ಲದೆ ಅಡುಗೆ ಸ್ಪರ್ಧೆ ನಡೆಸಿ ಇಲಾಖೆಯ ವತಿಯಿಂದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಾರತಿ ಜೆ, ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಚೈತ್ರಿಕ, ಅಂಗನವಾಡಿ ಮೇಲ್ವಿಚಾರಕರಾದ ಜಲಜಾಕ್ಷಿ ಮತ್ತು ಸುಜಾತ, ಪೋಶನ್ ಸಂಯೋಜಕರಾದ ಭವ್ಯ ಹಾಗೂ ಶ್ರೀ ಚಕ್ರ ರಾಜರಾಜೇಶ್ವರಿ ಮಹಿಳಾ ಮಂಡಳಿಯ ಅಧ್ಯಕ್ಷರಾದ ನಳಿನಿ ಉಪಸ್ಥಿತರಿದ್ದರು.

ಸಭೆಯಲ್ಲಿ ಮಕ್ಕಳ ಪೋಷಕರು, ಸ್ತ್ರೀ ಶಕ್ತಿ ಸಂಘಗಳ ಸದಸ್ಯರು, ಆಶಾ ಕಾರ್ಯಕರ್ತೆಯರು, ಮಹಿಳಾ ಮಂಡಳಿಯ ಸದಸ್ಯರು ಪುಟಾಣಿ ಮಕ್ಕಳು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ಯಾಮಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಅಂಗನವಾಡಿ ಸಹಾಯಕಿ  ಪುಷ್ಪಲತಾ ಸಹಕರಿಸಿದರು.

LEAVE A REPLY

Please enter your comment!
Please enter your name here