ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಹೃದಯ ದಿನಾಚರಣೆ

0

ಪುತ್ತೂರು: ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ಮತ್ತು ರಾಷ್ಟ್ರೀಯ ರೆಡ್ ಕ್ರಾಸ್ ಜಂಟಿ ಆಶ್ರಯದಲ್ಲಿ ಸೆ.29ರಂದು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಹೃದಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಹಾವೀರ ಆಸ್ಪತ್ರೆಯ ಕನ್ಸಲ್ಟೆಂಟ್ ಫೀಜಿಸಿಯನ್ ಡಾ. ಸುರೇಶ್ ಪುತ್ತೂರಾಯರವರು ಹೃದಯ ಸಂಬಂಧಿ ಖಾಯಿಲೆ ಬಗ್ಗೆ ಮತ್ತು ತಡೆಗಟ್ಟುವ ವಿಧಾನವನ್ನು ತಿಳಿಸಿದರು.ರೆಡ್ ಕ್ರಾಸ್ ಪುತ್ತೂರು ಘಟಕದ ಮುಖ್ಯಸ್ಥರಾದ ಸಂತೋಷ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಆರೋಗ್ಯದ ಬಗ್ಗೆ ನಮಗೆ ತಿಳಿದಿರುವ ಮಾಹಿತಿಗಳನ್ನು ಇತರರಿಗೂ ತಿಳಿಸಿಕೊಡುವ ಪ್ರಯತ್ನ ನಮ್ಮೀಂದಾಗಬೇಕು ಎಂದು ನುಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಶೋಭಿತಾ ಸತೀಶ್ ಕಾರ್ಯಕ್ರಮದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಡಾ .ಪ್ಯಾಟ್ರಿಕ್ ಸಿಪ್ರಿಯನ್ ಮಸ್ಕರೇನಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಭೋದಕ ಹಾಗೂ ಬೋಧಕೇತರ ವೃಂದ, ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿ ಪವನ್ ಕುಮಾರ್ ಸ್ವಾಗತಿಸಿ, ಅಕ್ಷತಾ ಜಿ. ವಂದಿಸಿದರು.ಅನ್ನಪೂಣ೯ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here