ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಕೆಎಸ್ಸಾರ್ಟಿಸಿ ಬಸ್.!

ಕಡಬ: ಓವರ್‌ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಸೆ.30ರಂದು ಸಂಜೆ ನಡೆದಿದೆ.

ಉಪ್ಪಿನಂಗಡಿಯಿಂದ ಕಡಬ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸನ್ನು ಹಿಂದಿನಿಂದ ತೆರಳುತ್ತಿದ್ದ ಮತ್ತೊಂದು ಕೆಎಸ್ಸಾರ್ಟಿಸಿ ಬಸ್ ಓವರ್‌ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ತರಚಿದ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದ ವೇಳೆ ಮಳೆ ಸುರಿಯುತ್ತಿದ್ದುದರಿಂದ ಬ್ರೇಕ್ ಸಿಗದೆ ಅಪಘಾತ ಸಂಭವಿಸಿರುವುದಾಗಿ ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.