ಪುತ್ತೂರು: ಪ್ರಾಥಮಿಕ ಆರೋಗ್ಯ ಕೇಂದ್ರ ಸರ್ವೆ, ರಾಜ್ಯ ಪ್ರಶಸ್ತಿ ಪುರಸ್ಕೃತ ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲ, ರೋಟರಿ ಕಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವುಗಳ ಆಶ್ರಯದಲ್ಲಿ ರಕ್ತದಾನ ಶಿಬಿರ ಕಲ್ಲಮ ಶ್ರೀ ಗುರು ರಾಘವೇಂದ್ರ ಮಠದ ಸಭಾಂಗಣದಲ್ಲಿ ನಡೆಯಿತು.
ಮುಂಡೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪ ನಡುಬೈಲು ಕಾರ್ಯಕ್ರಮ ಉದ್ಘಾಟಿಸಿದರು. ಕಲ್ಲಮ ರಾಘವೇಂದ್ರ ಮಠದ ವ್ಯವಸ್ಥಾಪಕರಾದ ಡಾ ಸೀತಾರಾಮ್ ಭಟ್ ಕಲ್ಲಮ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ ಬದ್ರುದ್ದೀನ್, ಗ್ರಾ.ಪಂ ಸದಸ್ಯರಾದ ಚಂದ್ರಶೇಖರ ಎನ್ಎಸ್ಡಿ, ಕಮಲೇಶ್ ಸರ್ವೆದೋಳಗುತ್ತು, ಯುವಕ ಮಂಡಲದ ಗೌರವ ಸಲಹೆಗಾರರಾದ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀನಿವಾಸ್ ಎಚ್ ಬಿ, ತಾಲೂಕು ಆರೋಗ್ಯಾಧಿಕಾರಿ ಡಾ ದೀಪಕ್ ರೈ, ಸರ್ವೆ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಮಿತಾ ನಾಯ್ಕ್ ಉಪಸ್ಥಿತರಿದ್ದರು. ರೋಟರಿ ಬ್ಲಡ್ ಬ್ಯಾಂಕ್ನ ವೈದ್ಯರಾದ ಡಾ ರಾಮಚಂದ್ರ ಭಟ್ ರಕ್ತದಾನದ ಬಗ್ಗೆ ಮಾಹಿತಿ ನೀಡಿದರು.
ಪ್ರಾಥಮಿಕ ಅರೋಗ್ಯ ಕೇಂದ್ರದ ವತಿಯಿಂದ ಬಿ ಪಿ ಹಾಗೂ ಮಧುಮೇಹ ತಪಾಸಣೆ ಶಿಬಿರ ನಡೆಯಿತು. ಸರ್ವೆ ಗ್ರಾಮವನ್ ಡಿಜಿಟಲ್ ಸೇವಾ ಕೇಂದ್ರದ ವತಿಯಿಂದ ಸ್ವಾತಿ ಅವರು ಅಯುಷ್ಮಾನ್ ಭಾರತ ಅರೋಗ್ಯ ಕಾರ್ಡ್ ನೋಂದಣಿ ಕಾರ್ಯಕ್ರಮ ನಡೆಸಿಕೊಟ್ಟರು. ಹಿರಿಯ ರಕ್ತದಾನಿ ಬಿ ಟಿ ಮಹೇಶ್ಚಂದ್ರ ಸಾಲಿಯಾನ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸರ್ವೆ ಪ್ರಾಥಮಿಕ ಅರೋಗ್ಯ ಕೇಂದ್ರದ ಸಿಬ್ಬಂದಿಗಳು, ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ಪದಾಧಿಕಾರಿಗಳು, ಸದಸ್ಯರು, ಶ್ರೀ ಗೌರಿ ಮಹಿಳಾ ಮಂಡಲದ ಪದಾಧಿಕಾರಿಗಳು, ರೋಟರಿ ಕಾಂಪ್ಕೋ ಬ್ಲಡ್ ಬ್ಯಾಂಕ್ ಸಿಬ್ಬಂದಿಗಳು ಸಹಕರಿಸಿದರು. ಶಿಬಿರದಲ್ಲಿ ೩೮ ಯುನಿಟ್ ರಕ್ತ ಸಂಗ್ರಹಿಸಲಾಯಿತು. ಸರ್ವೆ ಪ್ರಾಥಮಿಕ ಅರೋಗ್ಯ ಕೇಂದ್ರದ ಪವಿತ್ರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಗೌತಮ್ರಾಜ್ ಕರುಂಬಾರು ವಂದಿಸಿದರು.