ಸ್ವಚ್ಛತಾ ಅಭಿಯಾನ, ವಿಶೇಷ ಗ್ರಾಮ ಸಭೆ
ಉಪ್ಪಿನಂಗಡಿ: ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ಮಹಾತ್ಮಾ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಇದರ ಅಂಗವಾಗಿ ಸ್ವಚ್ಛತಾ ಅಭಿಯಾನ, ಸ್ವಚ್ಛತಾ ಹೀ ಸೇವಾ ಆಂದೋಲನಾ ಮತ್ತು ಗ್ರಾಮ ನೈರ್ಮಲ್ಯ ಯೋಜನೆಯ ಕ್ರಿಯಾ ಯೋಜನೆ ತಯಾರಿ, ಗ್ರಾಮ ಪಂಚಾಯಿತಿ ದೂರದೃಷ್ಠಿ ಯೋಜನೆಯ ಮಾಹಿತಿ ಕಾರ್ಯಗಾರ, ಕಾಮಗಾರಿಗಳ ಗುಚ್ಛ ತಯಾರಿ ಬಗ್ಗೆ, ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕ್ರಿಯಾ ಯೋಜನೆ ತಯಾರಿ, ಅಮೃತ ಗ್ರಾಮ ಪಂಚಾಯಿತಿ ಯೋಜನೆಯ ಕ್ರಿಯಾ ಯೋಜನೆ, ಪ್ರಧಾನಮಂತ್ರಿ ಆವಾಜ್ ಯೋಜನೆಯ ಫಲಾನುಭವಿಗಳ ಆಯ್ಕೆ ಕುರಿತು ವಿಶೇಷ ಗ್ರಾಮ ಸಭೆ ಅ. 2ರಂದು ಜರಗಿತು.
ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಚಂದ್ರ ಮುಳಿಯ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚತ್ರಕ್ಕೆ ಪುಷ್ಪಾರ್ಚಣೆ ಮಾಡಿ ಉದ್ಘಾಟಿಸಿ ಮಾತನಾಡಿ ನಾವು ಇಂದು ಸ್ವಾವಲಂಭಿಗಳಾಗಿ ಬದುಕುತ್ತಿದ್ದೇವೆ ಎಂದರೆ ಅದಕ್ಕೆ ಮಹಾತ್ಮಾ ಗಾಂಧೀಜಿಯವರು ಕಾರಣರು, ಅವರ ತತ್ವ ಆದರ್ಶಗಳು ನಮಗೆ ದಾರಿ ದೀಪವಾಗಿದೆ ಎಂದ ಅವರು ಗ್ರಾಮದ ಸ್ವಚ್ಛತೆ ಕಾಪಾಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ, ಈ ನಿಟ್ಟಿನಲ್ಲಿ ಪ್ರತಿಯೋರ್ವರೂ ಸ್ವಚ್ಛತೆಗೆ ಸಹಕಾರ ನೀಡಬೇಕು ಎಂದರು.
ಸ್ವಚ್ಛತಾ ಜಾಥಾ:
ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಕಚೇರಿಯಿಂದ ಹೊರಟು ಸಮುದಾಯ ಆರೋಗ್ಯ ಕೇಂದ್ರ, ಬಸ್ ನಿಲ್ದಾಣ, ಪೇಟೆಯಲ್ಲಿ ಕಸ ತೆಗೆಯುವ ಮೂಲಕ ಸಾಗಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಸುರೇಶ್ ಅತ್ರಮಜಲು, ಯು.ಕೆ. ಇಬ್ರಾಹಿಂ, ಮೈಸಿದಿ ಇಬ್ರಾಹಿಂ, ಅಬ್ದುಲ್ ರಶೀದ್, ವಿದ್ಯಾಲಕ್ಷ್ಮಿ ಪ್ರಭು, ವನಿತಾ, ಆರೋಗ್ಯ ಸಹಾಯಕಿ ಗಾಯತ್ರಿ, ಆಶಾ ಕಾರ್ಯಕರ್ತರಾದ ಮಮತಾ, ಧನವತಿ, ವನಿತಾ, ಪುಷ್ಪಾ, ಸಂಘ ಸಂಸ್ಥೆ ಪದಾಧಿಕಾರಿಗಳಾದ ಕೈಲಾರ್ ರಾಜಗೋಪಾಲ ಭಟ್, ಸಿದ್ದಿಕ್ ಕೆಂಪಿ, ಎನ್. ಉಮೇಶ್ ಶೆಣೈ, ಲತಾ, ಪಂಚಾಯಿತಿ ಸಿಬ್ಬಂದಿಗಳಾದ ಜ್ಯೋತಿ, ಮಾಲಿಂಗ, ಆಶಾ, ಇಸಾಕ್, ರಕ್ಷಿತ್, ಶ್ರೀನಿವಾಸ, ಇಕ್ಬಾಲ್, ಶುಭಾ, ಆನಂದ, ಸುಂದರ, ತನಿಯ ಮತ್ತಿತರರುಉಪಸ್ಥಿತರಿದ್ದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಸ್ವಾಗತಿಸಿ, ಕಾರ್ಯದರ್ಶಿ ದಿನೇಶ್ ವಂದಿಸಿದರು.