ಇಂದ್ರಪ್ರಸ್ಥ ವಿದ್ಯಾ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

0

ಉಪ್ಪಿನಂಗಡಿ : ಅಕ್ಟೋಬರ್ 2 ರಂದು ಇಲ್ಲಿನ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿವನ್ನು ಆಚರಿಸಲಾಯಿತು.

ಈ ವೇಳೆ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರಭಾವಚಿತ್ರಕ್ಕೆ ಪುಷ್ಪನ ನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ 8 ನೇ ತರಗತಿ ವಿದ್ಯಾರ್ಥಿನಿ ಅನಘಾ ಎಂ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಕುರಿತು ಮಾತನಾಡಿದರು. ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್‌  ಮಾತನಾಡಿ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಉತ್ತಮ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿಸಂಸ್ಥೆಯ ಉಪನ್ಯಾಸಕರು, ಶಿಕ್ಷಕ – ಶಿಕ್ಷಕೇತರ ವೃಂದ ಹಾಗೂ ಪೋಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here