ಪಾಣಾಜೆ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

0

ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್  ಅ.2ರಂದು  ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು .

ಗ್ರಾಮ ಪಂಚಾಯತ್ ಅಧ್ಯಕ್ಷೆ  ಭಾರತಿ ಭಟ್, ಉಪಾಧ್ಯಕ್ಷ ಅಬೂಬಕ್ಕರ್ ಕೆ, ಸದಸ್ಯರಾದ ಸುಭಾಸ್ ರೈ ,ಮೋಹನ ನಾಯ್ಕ, ಸುಲೋಚನಾ, ಜಯಶ್ರೀ ದೇವಸ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಮತಿ, ಕಾರ್ಯದರ್ಶಿ ಆಶಾ, ಹಾಗೂ ಸಿಬ್ಬಂದಿಗಳು, ಗ್ರಂಥಾಲಯದ ಸಿಬ್ಬಂದಿ ಭಾಗೀರಥಿ ಹಾಗೂ ಸಂಜೀವಿನಿ ಒಕ್ಕೂಟದ ಎಂಬಿಕೆ ನವಿತಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಪ್ರಯುಕ್ತ ಸ್ವಚ್ಛತಾ ಕಾರ್ಯ ನಿರ್ವಹಿಸುವ ಸ್ವಚ್ಛತಾಕರ್ಮಿಗಳನ್ನು ಗೌರವಿಸಲಾಯಿತುಹಾಗೂ ಓದುವ ಬೆಳಕು ಕಾರ್ಯಕ್ರಮದ ಅಂಗವಾಗಿ ಗ್ರಂಥಾಲಯದಲ್ಲಿ ಈ ಹಿಂದೆ ಶಾಲಾ ಮಕ್ಕಳಿಗಾಗಿ ನಡೆಸಿದ್ದ ಚೆಸ್ ಪಂದ್ಯಾಟದಲ್ಲಿ ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಅವರ ಪ್ರಶಸ್ತಿಯನ್ನು ಅವರ ಸಹಪಾಠಿಗಳು ಪಡೆದುಕೊಂಡರು.

LEAVE A REPLY

Please enter your comment!
Please enter your name here