ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗಾಂಧೀ ಜಯಂತಿ, ಶಾರದಾ ಪೂಜೆ

0

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅ.2ರಂದು ಗಾಂಧಿ ಜಯಂತಿ ಹಾಗೂ ಶಾರದಾ ದೇವಿಯ ಪೂಜೆಯನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಜಯರಾಮ್ ರೈ ರವರು ದೀಪ ಬೆಳಗಿಸಿ, 153 ನೇ ಗಾಂಧಿ ಜಯಂತಿಯ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ, ಶಿಕ್ಷಕ ವೃಂದ, ಶಿಕ್ಷಕರೇತರ ವೃಂದ ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿ, ಪೂಜೆ ಹಾಗೂ ಭಜನೆಯಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here