ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 24ನೇ ನೂತನ ಗಂಜಿಮಠ ಶಾಖೆಯ ಉದ್ಘಾಟನಾ ಸಮಾರಂಭ

0

ಪುತ್ತೂರು:  ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 24ನೇ ನೂತನ ಗಂಜಿಮಠ ಶಾಖೆಯ ಉದ್ಘಾಟನಾ ಸಮಾರಂಭವು ಅಕ್ಟೋಬರ್ 15 ರಂದು ಬುಧವಾರ ಪೂರ್ವಾಹ್ನ 11 ಗಂಟೆಗೆ ಗಂಜಿಮಠ ಗ್ರಾಮ ಪಂಚಾಯತ್ ಕಟ್ಟಡದ ಮೊದಲ ಮಹಡಿಯಲ್ಲಿ ನಡೆಯಲಿದೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಹಕಾರ ರತ್ನ  ಚಿತ್ತರಂಜನ್ ಬೋಳಾರ್  ವಹಿಸಲಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ  ಉದ್ಘಾಟನೆ ಮಾಡಲಿದ್ದಾರೆ. ಗಂಜಿಮಠ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ  ಗಣೇಶ್ ಭಟ್ ಇವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಉದ್ಯಮಿ  ಚಂದ್ರಹಾಸ್ ಶೆಟ್ಟಿ ನಾರ್ಲ ಇವರು ನಿರಖು ಠೇವಣಿ ಬಿಡುಗಡೆ ಮಾಡಲಿದ್ದಾರೆ. ಉದ್ಯಮಿ, ಇರುವೈಲು ಪಾಣಿಲ  ಸತೀಶ್ಚಂದ್ರ ಸಾಲ್ಯಾನ್ ಇವರು ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡಲಿದ್ದಾರೆ, ಗಂಜಿಮಠ ಗ್ರಾಮ ಪಂಚಾಯತ್ ಇದರ ಅಧ್ಯಕ್ಷ  ನೋಣಯ್ಯ ಕೋಟ್ಯಾನ್ ಇವರು ಭದ್ರತಾಕೋಶ ಉದ್ಘಾಟಿಸಲಿದ್ದಾರೆ, ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪೆರಾರ- ಗಂಜಿಮಠ ಇದರ ಗೌರವಾಧ್ಯಕ್ಷ ಕೃಷ್ಣ ವಿ. ಅಮೀನ್ ಇವರು ಉಳಿತಾಯ ಖಾತೆಗೆ ಚಾಲನೆ ನೀಡಲಿದ್ದಾರೆ, ರಿಕ್ಷಾ ಚಾಲಕ ಮತ್ತು ಮಾಲಕರ ಸಂಘ ಗಂಜಿಮಠ ಇದರ ಅಧ್ಯಕ್ಷ ಜನಾರ್ಧನ ಒಡ್ಡೂರು ಇವರು ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ, ಬಗರ್ ಹುಕುಂ ಸಕ್ರಮ ಸಮಿತಿ, ಮಂಗಳೂರು ಉತ್ತರ ಇದರ ಸದಸ್ಯ ಶೋಹನ್ ಅತಿಕಾರಿ ಇವರು ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಗಂಜಿಮಠ ಗ್ರಾಮ ಪಂಚಾಯತ್ ಇದರ ಸದಸ್ಯರುಗಳಾದ  ಸುನೀಲ್ ಮನೋಜ್ ಫೆರ್ನಾಂಡಿಸ್,  ಮೊಹಮ್ಮದ್ ಜಹೂರ್,  ಮೊಹಮ್ಮದ್ ಸಾದಿಕ್,  ರೋಹಿತಾಕ್ಷಿ ಹಾಗೂ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ  ಜೆ. ಸುನೀಲ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ..
ಸಂಘವು ಈಗಾಗಲೇ ಅವಿಭಜಿತ ದ.ಕ. ಜಿಲ್ಲೆಯಲ್ಲಿ 23 ಶಾಖೆಗಳನ್ನು ಹೊಂದಿದ್ದು, ವಾರ್ಷಿಕ ರೂ.1350 ಕೋಟಿಗೂ ಮೀರಿ ವ್ಯವಹಾರದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಮಡಿಕೇರಿ ಹಾಗೂ ಮೈಸೂರಿನಲ್ಲಿಯೂ ಶಾಖೆಗಳನ್ನು ತೆರೆಯುವ ಯೋಜನೆಯನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಗ್ರಾಹಕರು ಹಾಗೂ ಸಾರ್ವಜನಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಿ, ಸಂಘದಲ್ಲಿ ಲಭ್ಯವಿರುವ ಸೇವಾ-ಸೌಲಭ್ಯವನ್ನು ಪಡೆಯಬೇಕೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್‌ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here