ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಗ್ರಾಮ ಸಭೆ, ಗಾಂಧಿ ಜಯಂತಿ ಆಚರಣೆ, ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ಒ 2 ರಂದು ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಸುಬ್ರಹ್ಮಣ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಪ್ರಾರಂಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸೂಚಿಸಲಾಯಿತು.
ನಂತರ ಸ್ವಚ್ಛತಾ ಹಿ ಸೇವಾ ಆಂದೋಲನ ಕಾರ್ಯಕ್ರಮದ ಪ್ರಯುಕ್ತ ಪ್ರಮಾಣ ವಚನ ಹಾಗೂ ಕೌಡಿಚ್ಚಾರು ಪೇಟೆಯಲ್ಲಿ ಸ್ವಚ್ಛತಾ ಕಾರ್ಯ ನೆರವೇರಿಸಲಾಯಿತು.
2023-2024 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕ್ರೀಯಾ ಯೋಜನೆ ತಯಾರಿ , ಸಾರ್ವಜನಿಕ ಅರ್ಜಿ ಸ್ವೀಕಾರ, ಗ್ರಾಮ ನೈರ್ಮಲ್ಯ ಯೋಜನೆ ಕ್ರೀಯಾ ಯೋಜನೆ ತಯಾರಿ ಮಾಡಲಾಯಿತು.ಸಹಾಯಕ ಶಿಶು ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನಾಧಿಕಾರಿ ಭಾರತಿ ಮಾರ್ಗದರ್ಶಿ ಅಧಿಕಾರಿಯಾಗಿ ಉಪಸ್ಥಿತರಿದ್ದು ಮಾಹಿತಿ ನೀಡಿದರು.ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮಕುಮಾರಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.ಪಂಚಾಯತ್ ಕಾರ್ಯದರ್ಶಿ ಶಿವರಾಮ ಮೂಲ್ಯ ಸ್ವಾಗತಿಸಿ ಸಿಬ್ಬಂದಿ ಪ್ರಭಾಕರ ವಂದಿಸಿದರು.