ರಾಮಕುಂಜ ಆ.ಮಾ.ಶಾಲೆಯಲ್ಲಿ ಶಿಕ್ಷಕರ, ಹಿರಿಯ ವಿದ್ಯಾರ್ಥಿಗಳ ಸಮಾವೇಶ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮಾವೇಶ ಅ.2ರಂದು ನಡೆಯಿತು.

1995 ರಿಂದ 2021ನೇ ಶೈಕ್ಷಣಿಕ ವರ್ಷದವರೆಗೆ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ ಸುಮಾರು 400ಕ್ಕಿಂತಲೂ ಹೆಚ್ಚು ಹಿರಿಯ ವಿದ್ಯಾರ್ಥಿಗಳು ಸಮಾವೇಶದಲ್ಲಿಪಾಲ್ಗೊಂಡಿದ್ದರು. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರು ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ನಾರಾಯಣ ಭಟ್ ಟಿ., ಶಾಲೆಯ ಸ್ಥಾಪಕ ಮುಖ್ಯೋಪಾಧ್ಯಾಯಿನಿ ಆರತಿ ಎ., ನಿಕಟಪೂರ್ವ ಮುಖ್ಯೋಪಾಧ್ಯಾಯ ಆನಂದ್ ಆರ್, ರಾಮಕುಂಜ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಕೆ. ಅತಿಥಿಗಳಾಗಿ ಭಾಗವಹಿಸಿದ್ದರು. ಶಾಲಾ ಆಡಳಿತಾಧಿಕಾರಿ ಆನಂದ್ ಎಸ್.ಟಿ., ಮುಖ್ಯೋಪಾಧ್ಯಾಯಿನಿಯರಾದ ಗಾಯತ್ರಿ ಯು.ಎನ್., ಲೋಹಿತ, ವ್ಯವಸ್ಥಾಪಕ ರಮೇಶ್ ರೈ, ತಾಂತ್ರಿಕ ಸಲಹೆಗಾರ ಜಯೇಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗೌರವಿಸಲಾಯಿತು. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ದಾಸಪ್ಪ ಇವರನ್ನು ಸನ್ಮಾನಿಸಲಾಯಿತು.

ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು.ಎನ್., ಸ್ವಾಗತಿಸಿದರು. ನಿಲಯ ವ್ಯವಸ್ಥಾಪಕ ರಮೇಶ್ ರೈ ವಂದಿಸಿದರು. ಶಿಕ್ಷಕರಾದ ಕಿಶೋರ್ ಕುಮಾರ್ ಬಿ ಮತ್ತು ಹರೀಶ್ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

ಮೊದಲಿಗೆ ಸಮಾವೇಶಕ್ಕೆ ಆಗಮಿಸಿದ ಹಿರಿಯ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆ ನಡೆಯಿತು. ನಂತರ ಹಿರಿಯ ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನಾ ಆಟಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು .ನಂತರ ವಿದ್ಯಾರ್ಥಿ ಸಂಘದ ರಚನೆಯ ಬಗ್ಗೆ ವಿದ್ಯಾರ್ಥಿಗಳಿಂದ ಅಭಿಪ್ರಾಯ ಸಂಗ್ರಹಿಸಲಾಯಿತು. ಹಿರಿಯ ವಿದ್ಯಾರ್ಥಿಗಳು ಕಲಿತ ವಿದ್ಯಾಸಂಸ್ಥೆಯ ಹಳೆಯ ನೆನಪುಗಳನ್ನು ಮೆಲುಕು ಹಾಕಿ ಸಂಭ್ರಮಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಉಪಾಹಾರ ಮತ್ತು ಭೋಜನದ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು. ಶಿಕ್ಷಕರು, ಸಿಬ್ಬಂದಿ ವರ್ಗದವರು ಸಹಕರಿಸಿದರು.

LEAVE A REPLY

Please enter your comment!
Please enter your name here