ಅ. 5: ಆರ್ಲಪದವಿನಲ್ಲಿ 33 ನೇ ವರ್ಷದ ಸಾರ್ವಜನಿಕ ಶಾರದೋತ್ಸವ

0
ನಿಡ್ಪಳ್ಳಿ; ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆರ್ಲಪದವು ಪಾಣಾಜೆ ಇದರ 33 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ವೇದಮೂರ್ತಿ ಶ್ರೀಕೃಷ್ಣ ಭಟ್ ಪೌರೋಹಿತ್ಯದಲ್ಲಿ ಅ.5 ರಂದು ಆರ್ಲಪದವು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ವಠಾರದಲ್ಲಿ ಅದ್ದೂರಿಯಾಗಿ ನಡೆಯಲಿದೆ.
ಧಾರ್ಮಿಕ ಕಾರ್ಯಕ್ರಮಗಳು; 
ಬೆಳಿಗ್ಗೆ ಗ 7.10 ಕ್ಕೆ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ. ಬೆಳಿಗ್ಗೆ ಗಂಟೆ 8.30 ರಿಂದ ಗಣಪತಿ ಹವನ. ಕಾರ್ತಿಕೇಯ ಭಜನಾ ಸಂಘ ಆರ್ಲಪದವು ಇವರಿಂದ ಭಜನಾ ಕಾರ್ಯಕ್ರಮ, ಗಂಟೆ 9.30 ರಿಂದ ಅಕ್ಷರಾರಂಭ ನಂತರ ಆಯುಧ ಪೂಜೆ, ಬೆಳಿಗ್ಗೆ 11 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, ಬಹುಮಾನ ವಿತರಣೆ, ಮಧ್ಯಾಹ್ನ 12.30 ರಿಂದ ಮಹಾಪೂಜೆ ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ, ಮಧ್ಯಾಹ್ನ ಗಂಟೆ 1 ರಿಂದ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಪುತ್ತೂರು ಇದರ ಕಲಾವಿದರಿಂದ ಭರತನಾಟ್ಯ ಮತ್ತು ನೃತ್ಯ ವೈವಿಧ್ಯ, ಮಧ್ಯಾಹ್ನ ಗಂಟೆ 3 ರಿಂದ ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷಗಾನ ಕಲಾ ಸಂಘ ಆರ್ಲಪದವು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಬಾಲಕೃಷ್ಣ ಪೂಜಾರಿ ಉಡ್ಡಂಗಲ ಇವರ ನಿರ್ದೇಶನದಲ್ಲಿ‌ ಯಕ್ಷಗಾನ ‘ ಜಾಂಬವತಿ ಕಲ್ಯಾಣ- ವೃಷಕೇತು ವಿಜಯ’,   ಸಂಜೆ ಗಂಟೆ 6 ರಿಂದ ಮಹಾಪೂಜೆ ನಂತರ ಶೋಭಾಯಾತ್ರೆ ನಡೆಯಲಿದೆ.
ವಿಶೇಷ ಆಕರ್ಷಣೆ; ಶ್ರೀ ಮಣಿಕಂಠ ಚೆಂಡೆ ಮೇಳ ಶ್ರೀ ರಾಮ ನಗರ ರೆಂಜ ಬೆಟ್ಟಂಪಾಡಿ ಇವರಿಂದ ಸಿಂಗಾರಿ ಮೇಳ ಮತ್ತು ಸುಡುಮದ್ದು ಪ್ರದರ್ಶನ ನಡೆಯಲಿದೆ ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here