ಮಹಾನ್ ವ್ಯಕ್ತಿಗಳ ತತ್ವಾದರ್ಶಗಳು ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿ : ಹರಿಪ್ರಸಾದ್ ಎಸ್

0

ಪುತ್ತೂರು: ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರ ಕಂಡ ಮಹಾನ್ ವ್ಯಕ್ತಿತ್ವಗಳು. ಇವರು ಪಾಲಿಸಿಕೊಂಡು ಬಂದಂತಹ ತತ್ವಾದರ್ಶಗಳು ನಮ್ಮೆಲ್ಲರಿಗೂ ದಾರಿದೀಪವಾಗಿವೆ ಎಂದು ಬೆಟ್ಟಂಪಾಡಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಹರಿಪ್ರಸಾದ್ ಎಸ್ ಹೇಳಿದರು. ಇಂತಹ ಮಹಾನ್ ವ್ಯಕ್ತಿಗಳ ಆದರ್ಶ ನಮ್ಮ ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿ ಎಂದು ಅಭಿಪ್ರಾಯಪಟ್ಟರು. ಇವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕರಾದ ಸಾರ್ಥಕ್ ಟಿ ಮಾತನಾಡಿ ಎನ್.ಎಸ್.ಎಸ್ ಸ್ವಯಂಸೇವಕರಾದ ನಾವು ಇಂತಹ ವ್ಯಕ್ತಿಗಳ ಆದರ್ಶಗಳಾದ ಸರಳ ಜೀವನ, ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆಗಳನ್ನು ಅಳವಡಿಸಿಕೊಂಡು ಸಮಾಜ ಸೇವೆಗೆ ಸದಾ ಸಿದ್ಧರಿರಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿಯವರ ಮಾರ್ಗದರ್ಶನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು ಉಪಸ್ಥಿತರಿದ್ದರು. ಸ್ವಯಂ ಸೇವಕರಾದ ಕಿರಣ್ ಕೆ ಸ್ವಾಗತಿಸಿ, ದಯಾನಿಧಿ ಎನ್  ವಂದಿಸಿದರು. ನಿತ್ಯಾನಂದ ಬಿ ಕಾರ್ಯಕ್ರಮ ನಿರ್ವಹಿಸಿದರು.

ಬಳಿಕ ಸ್ವಯಂ ಸೇವಕರು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ಥಳೀಯ ಐತಿಹಾಸಿಕ ಸ್ಥಳವಾದ ಬೆಂದ್ರ್ ತೀರ್ಥ ಮತ್ತು ರೆಂಜ ಬಸ್ಸು ತಂಗುದಾಣಗಳ ಸ್ವಚ್ಛತಾ ಕಾರ್ಯ ನಡೆಸಿದರು..

LEAVE A REPLY

Please enter your comment!
Please enter your name here