ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಮಾಪ್ತಿ

0

ನಿಡ್ಪಳ್ಳಿ; ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀಕ್ಷೇತ್ರ ನಿಡ್ಪಳ್ಳಿ ಇಲ್ಲಿ ಸೆ.26 ರಿಂದ ಅ.5 ರವರೆಗೆ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ನವೀನ್ ಹೆಬ್ಬಾರ್ ಇವರ ಪೂಜಾ ವಿಧಿ ವಿಧಾನಗಳೊಂದಿಗೆ ನವರಾತ್ರಿ ಉತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
       
ಪ್ರತಿ ದಿನ ಬೆಳಿಗ್ಗೆ ನಿತ್ಯಪೂಜೆ, ನಂತರ ಭಜನೆ ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ. ಸಂಜೆ ಭಜನೆ ರಾತ್ರಿ ವಿಶೇಷ ಅಲಂಕಾರ ಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.
     
ಅ.1 ರಂದು ಬೆಳಿಗ್ಗೆ ನಿತ್ಯಪೂಜೆ ನಂತರ ಸಾಮೂಹಿಕ ಚಂಡಿಕಾ ಹೋಮ ನಡೆದು ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.
   
  ಅ.4 ರಂದು ವಿಶೇಷ ಆಯುಧ ಪೂಜೆ ನಡೆಯಿತು. ರಾತ್ರಿ ಮಹಾನವಮಿಯ ಪ್ರಯುಕ್ತ ವಿಶೇಷ ಅಲಂಕಾರ ಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.
ಅ.5 ರಂದು ಕದಿರು ತುಂಬಿಸುವುದು ಮತ್ತು ಅಕ್ಷರಾಭ್ಯಾಸ ನಡೆದು ಅದ್ದೂರಿಯ ನವರಾತ್ರಿ ಉತ್ಸವ ಸಮಾಪ್ತಿ ಗೊಂಡಿತು.ದೇವಾಲಯದ ಆಡಳಿತ ಮಂಡಳಿ ಮತ್ತು ಊರ ಪರವೂರ ಸಾವಿರಾರು ಭಕ್ತಾದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here