ಪುತ್ತೂರು: ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಕೆದಂಬಾಡಿ ಶ್ರೀರಾಮ ಮಂದಿರದಲ್ಲಿ ನವರಾತ್ರಿ ಉತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸೆ. 26 ರಿಂದ ಅ. 4 ರವರೆಗೆ ನಡೆಯಿತು.
ಪ್ರತಿದಿನ ರಾತ್ರಿ ಭಜನಾ ಕಾರ್ಯಕ್ರಮ, ಅನ್ನಸಂತರ್ಪಣೆ ನಡೆದು ಸಾವಿರಾರು ಭಕ್ತಾಭಿಮಾನಿಗಳು ಅನ್ನಪ್ರಸಾದ ಸ್ವೀಕರಿಸಿದರು.
ಅ. 3 ರಂದು ಸಂಜೆ ದುರ್ಗಾ ನಮಸ್ಕಾರ ಪೂಜೆ, ಸಾಮೂಹಿಕ ಆಯುಧಪೂಜೆ ನಡೆಯಿತು.
ಪ್ರತಿದಿನ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಸೆ. 26 ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಮಂಗಳೂರು ಇವರ ಪ್ರಾಯೋಜನೆಯಲ್ಲಿ ಸಮೂಹ ನೃತ್ಯ – ನೃತ್ಯಾರ್ಪಣಂ, ಸೆ. 27 ರಂದು ಕೆದಂಬಾಡಿ ಶಾಲಾ ಮಕ್ಕಳಿಂದ ಕಾರ್ಯಕ್ರಮ ವೈವಿದ್ಯ, ಸೆ. 28 ರಂದು ಭಕ್ತಿ ರಸಮಂಜರಿ, ಸೆ. 29 ರಂದು ಜಿಲ್ಲೆಯ ಪ್ರಸಿದ್ದ ಕಲಾವಿದರ ಕೂಡುವಿಕೆಯಲ್ಲಿ ‘ಭೀಷ್ಮ ಪರ್ವ’ ಯಕ್ಷಗಾನ ತಾಳಮದ್ದಳೆ, ಸೆ. 30 ರಂದು ಸಾಂಸ್ಕೃತಿಕ ಕಾರ್ಯಕ್ರಮ, ಅ. 1 ರಂದು ಡಾ. ಶೋಭಿತಾ ಸತೀಶ್ ರವರಿಂದ ಹರಿಕಥೆ, ಅ. 2 ರಂದು ಸ್ಥಳೀಯರಿಂದ ಕಾರ್ಯಕ್ರಮ ವೈವಿದ್ಯ, ಅ. 4 ರಂದು ‘ವೀರಮಣಿ ಕಾಳಗ’ ಯಕ್ಷಗಾನ ಬಯಲಾಟ ನಡೆಯಿತು.
ಅ. 4 ರಂದು ರಾತ್ರಿ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀರಾಮ ಮಂದಿರದ ಅಧ್ಯಕ್ಷ ಬೆದ್ರುಮಾರ್ ಜೈಶಂಕರ ರೈ ವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮಂಗಳೂರು ವಿಭಾಗ ಸೇವಾ ಪ್ರಮುಖ್ ಸುಭಾಸ್ ಕಳಂಜ ಧಾರ್ಮಿಕ ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಕೌಡಿಚ್ಚಾರ್ ಶ್ರೀಕೃಷ್ಣ ಭಜನಾ ಮಂದಿರದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವಾಸು ಪೂಜಾರಿ ಗುಂಡ್ಯಡ್ಕ, ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ತಿಂಗಳಾಡಿ ದೇವಗಿರಿ ಶ್ರೀ ದೇವತಾ ಭಜನಾ ಮಂಡಳಿ ಅಧ್ಯಕ್ಷ ಜಯರಾಮ ರೈ ಮಿತ್ರಂಪಾಡಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸ್ಥಳೀಯ ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು