ಪುತ್ತೂರು : ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿರುವ ಫಲಾನುಭವಿಗಳಿಗೆ ಉಚಿತ ಬಸ್‌ಪಾಸ್ ನೀಡುವ ಯೋಜನೆ ಜಾರಿಗೊಳಿಸಿದೆ. ಮಂಡಳಿಯಲ್ಲಿ ಈಗಾಗಲೇ ನೋಂದಾಯಿಸಿರುವ ಫಲಾನುಭವಿಗಳು ತಮ್ಮ ವಾಸಸ್ಥಳಕ್ಕೆ ಹತ್ತಿರದಲ್ಲಿರುವ ಕರ್ನಾಟಕ ಒನ್/ಗ್ರಾಮ ಸೇವಾ ಒನ್ ಸೆಂಟರ್‌ಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಕಾರ್ಮಿಕ ಕಲ್ಯಾಣ ಇಲಾಖೆಯವರು ನೀಡಿರುವ ಗುರುತಿನ ಚೀಟಿಯನ್ನು ಹಾಗೂ ಆಧಾರ್ ಕಾರ್ಡನ್ನು ಹಾಜರು ಪಡಿಸಿ, ಉಚಿತ ಪಾಸ್ ಪಡೆದುಕೊಳ್ಳಬಹುದು. ಪಾಸಿನಲ್ಲಿ ನಮೂದಿಸಿಲಾಗುವ ಪ್ರಾರಂಭಿಕ ಸ್ಥಳದಿಂದ 7 ಹಂತಗಳ ವರೆಗೆ (45 ಕಿ.ಮೀ) ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸ ಬಹುದು. ಸದರಿ ಪಾಸುದಾರರು ಕ.ರಾ.ಸಾ.ನಿಗಮ, ವಾ.ಕ.ರ.ಸಾ ನಿಗಮ ಹಾಗೂ ಕ.ಕ.ರ.ಸಾ ನಿಗಮದ ನಗರ, ಸಾಮಾನ್ಯ, ಹೊರವಲಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶವಿರುತ್ತದೆ. ಪಾಸುದಾರರು ಮೂಲ ಪಾಸುಗಳನ್ನು ಮಾತ್ರ ಜೊತೆಯಲ್ಲಿಟ್ಟು ಪ್ರಯಾಣಿಸುವುದು ಕಡ್ಡಾಯವಿರುತ್ತದೆ. ಪಾಸಿನ ನಕಲು ಪ್ರತಿ/ಕಲರ್ ಝರಾಕ್ಸ್ ಪಾಸುಗಳನ್ನು ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಉಚಿತ ಸಹಾಯವಾಣಿ 155214 ಸಂಖ್ಯೆ ಸಂಪರ್ಕಿಸ ಬಹುದು ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ