ಪುತ್ತೂರು: ಇಲ್ಲಿನ ಜಿ.ಎಲ್ ಕಾಂಪ್ಲೆಕ್ಸ್ ನಲ್ಲಿ ಶಾಖೆಯನ್ನು ಹೊಂದಿದ್ದು ಮಂಗಳೂರಿನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಭುವನೇಂದ್ರ ಸ್ವಾಮೀಜಿ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಮಂಗಳೂರಿನ ವಿ.ಟಿ ರಸ್ತೆಯಲ್ಲಿನ ವಿಠೋಬಾ ರುಕುಬಾಯಿ ದೇವಸ್ಥಾನದ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಶ್ರೀ ಭುವನೇಂದ್ರ ಸ್ವಾಮೀಜಿ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿ ಸಂಘ ಕಳೆದ 11 ವರ್ಷಗಳಲ್ಲಿ ಉತ್ತಮ ಬೆಳವಣಿಗೆ ದಾಖಲಿಸಿದೆ. 2021-22 ಸಾಲಿನಲ್ಲಿ ರೂ.65 ಕೋಟಿ ವಹಿವಾಟು ನಡೆಸಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ರೂ. 75 ಕೋಟಿ ವ್ಯವಹಾರ ನಡೆಸಲು ಉದ್ದೇಶಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಎಸ್ ಸತೀಶ್ ನಾಯಕ್ ತಿಳಿಸಿದ್ದಾರೆ.
ಅವರು ಸಹಕಾರಿ ಸಂಘದ 2021-22 ವಾರ್ಷಿಕ ಸಭೆಯಲ್ಲಿ ಮಾತನಾಡಿದರು. ಪ್ರಧಾನ ಕಚೇರಿಗೆ ಸ್ವಂತ ಕಟ್ಟಡ ನಿರ್ಮಾಣವಾಗಿದ್ದು, ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯಹಸ್ತದಿಂದ ಉದ್ಘಾಟನೆಯಾಗಿದೆ ಎಂದು ಅವರು ತಿಳಿಸಿದರು. ಅಕ್ಟೋಬರ್ 1 ರಿಂದ ಠೇವಣಿಗಳ ಬಡ್ಡಿದರವನ್ನು 8% ಕ್ಕೆ ಹೆಚ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸನ್ಮಾನ:
ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ನಿರ್ದೇಶಕಿಯಾಗಿ ಚುನಾಯಿತರಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿರುವ ಭಾರತಿ ಜಿ ಭಟ್ ಅವರನ್ನು,ಸೇವಾ ಭಾರತಿ ವತಿಯಿಂದ ಇದರ ಅಂಗಸಂಸ್ಥೆಯಾಗಿರುವ ಚೇತನಾ ಬಾಲ ವಿಕಾಸ ಕೇಂದ್ರದಲ್ಲಿ 25-30 ವರ್ಷಗಳಿಂದ ನಿಸ್ವಾರ್ಥ ಸೇವೆಗೈದಿರುವ ಗೋಪಾಲಕೃಷ್ಣ ಶೆಣೈ, ಸುಮನಾ ಬಾಳಿಗಾ, ಕುಸುಮಾ ಅವರನ್ನು ಮತ್ತು ಆಟೋಮೊಬೈಲ್ ಕ್ಷೇತ್ರದ ಸಾಧನೆಗಾಗಿ ದಕ್ಷಿಣ ಕನ್ನಡ ಆಟೋಮೊಬೈಲ್ ಮತ್ತು ಟಯರ್ ಡೀಲರ್ ಅಸೋಸಿಯೇಶನ್ ವತಿಯಿಂದ ಜೀವನ ಶ್ರೇಷ್ಠ ಸಾಧಕ ಪ್ರಶಸ್ತಿಗೆ ಭಾಜನರಾದ ಸಂಸ್ಥೆಯ ನಿರ್ದೇಶಕ ಟಿ ಗಣಪತಿ ಪೈ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಉಪಾಧ್ಯಕ್ಷಸಿಎ ಜಗನ್ನಾಥ ಕಾಮತ್ ಸ್ವಾಗತಿಸಿದರು. ನಿರ್ದೇಶಕ ಮಂಡಳಿಯ ನಿವೇದಿತಾ ಜಿ ಪ್ರಭು ವಂದಿಸಿದರು.