ಹಲ್ಲೆ,ದರೋಡೆ ನಡೆಸಿ ಜೀಬೆದರಿಕೆ ಆರೋಪ: ಇಚ್ಲಂಪಾಡಿ ನಿವಾಸಿಯಿಂದ ದೂರು; ಮೂವರ ವಿರುದ್ದ ಕೇಸು

0


ನೆಲ್ಯಾಡಿ: ತನಗೆ ಹಲ್ಲೆಗೈದು ದರೋಡೆ ನಡೆಸಿ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿರುವ ಬಗ್ಗೆ ಇಚ್ಲಂಪಾಡಿ ಗ್ರಾಮದ ಅಲಂಗ ನಿವಾಸಿ ಜೋಯಿ ವಿ.ಡಿ.ಎಂಬವರು ನೀಡಿದ ದೂರಿನ ಮೇರೆಗೆ ನವನೀತ್, ರಾಹುಲ್ ಹಾಗೂ ಸುಜಿತ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ.4ರಂದು ರಾತ್ರಿ ಸುಮಾರು 11 ಗಂಟೆಯ ವೇಳೆಗೆ ಅಂತ್ಯಸಂಸ್ಕಾರ ಕಾರ್ಯವೊಂದರ ನಿಮಿತ್ತ ನಾನು ಅಡ್ಡಹೊಳೆ ಚರ್ಚ್‍ನಲ್ಲಿದ್ದ ಸಂದರ್ಭ ಅಲ್ಲಿಗೆ ಬಂದ ಪರಿಚಯದ ನವನೀತ್ ಎಂಬಾತ ಶಿರಾಡಿವರೆಗೆ ತನ್ನನ್ನು ಸ್ಕೂಟರ್‍ನಲ್ಲಿ ಬಿಡುವಂತೆ ಹೇಳಿದ್ದು ಅದರಂತೆ ನಾವು ಸ್ಕೂಟರ್‍ನಲ್ಲಿ ಹೋಗುತ್ತಿದ್ದ ವೇಳೆ ಶಿರಾಡಿ ಗ್ರಾಮದ ಪುಲ್ಲೋಟು ಎಂಬಲ್ಲಿಗೆ ತಲುಪಿದಾಗ ನವನೀತರವರು ಸ್ಕೂಟರ್ ನಿಲ್ಲಿಸುವಂತೆ ಹೇಳಿದರು. ಸ್ಕೂಟರ್ ನಿಲ್ಲಿಸಿದಾಗ ಅಲ್ಲೇ ಪಕ್ಕದಲ್ಲಿ ಅಟೋ ರಿಕ್ಷಾವೊಂದು ನಿಂತಿದ್ದು ರಿಕ್ಷಾದಲ್ಲಿದ್ದ ರಾಹುಲ್ ಹಾಗೂ ಸುಜಿತ್ ಎಂಬವರು ಇಳಿದು ಬಂದು ಬಳಿಕ ಮೂವರೂ ಸೇರಿಕೊಂಡು ನನಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕೊಲೆಯತ್ನ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು ಮೊಬೈಲ್ ಹಾಗೂ ಹಣವನ್ನು ದರೋಡೆ ಮಾಡಿದ್ದರು. ಈ ಪೈಕಿ ರಾಹುಲ್ ಕೈಯಿಂದ ಕುತ್ತಿಗೆಯ ಹಿಂಬದಿಗೆ ಹಾಗೂ ಮುಖಕ್ಕೆ ಗುದ್ದಿ ಕಾಲಿನಿಂದ ಹೊಟ್ಟೆಗೆ ತುಳಿದು ಚಾಕು ಕುತ್ತಿಗೆಗೆ ಇಟ್ಟು ಕೊಲ್ಲುವುದಾಗಿ ಹೇಳಿದ್ದಾರೆ. ನವನೀತ್ ದೊಣ್ಣೆಯಿಂದ ತಲೆಗೆ ಹಾಗೂ ಬಲಬದಿ ಭುಜಕ್ಕೆ ಹೊಡೆದಿದ್ದು ಸುಜಿತ್ ಕಲ್ಲಿನಿಂದ ಬಲ ಕಾಲಿನ ಮೊಣಗಂಟಿಗೆ ಹೊಡೆದಿದ್ದಾನೆ. ರಿಕ್ಷಾದಿಂದ ಹಗ್ಗ ತಂದು ಕುತ್ತಿಗೆ ಬಿಗಿದು ಕೊಲ್ಲುವ ಪ್ರಯತ್ನ ಮಾಡಿದ್ದರು. ಹಣಕ್ಕಾಗಿ ಬೇಡಿಕೆ ಇಟ್ಟ ತಂಡ ನಂತರದಲ್ಲಿ ನನ್ನ ಮೊಬೈಲ್ ಹಾಗೂ ಹಣವನ್ನು ದೋಚಿ ಪ್ರವಾಸಿಗರ ಕಾರೊಂದು ಬರುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದರು ಎಂದು ಜೋಯಿ ಅವರು ಆರೋಪಿಸಿದ್ದಾರೆ. ಹಲ್ಲೆಯಿಂದ ಜೋಯಿಯವರ ಬಲಕಾಲ ಮೊಣಗಂಟಿಗೆ, ಕಾಲು, ಮೂಗು, ಹಣೆಗೆ ತೀವ್ರ ಸ್ವರೂಪದ ಗಾಯ ಹಾಗೂ ಬಲಭುಜಕ್ಕೆ, ಕುತ್ತಿಗೆಯ ಹಿಂಬಾಗ, ಹೊಟ್ಟೆಗೆ, ಎದೆಗೆ ಗುದ್ದಿದ ಗಾಯವಾಗಿರುತ್ತದೆ. ¾¾ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲ್ಲದೇ ಬಿಡುವುದಿಲ್ಲ ಎಂಬುದಾಗಿ ಬೆದರಿಕೆ ಹಾಕಿದ ಯುವಕರ ತಂಡ ನನ್ನ ಸ್ಕೂಟರನ್ನು ಜಖಂಗೊಳಿಸಿದ್ದರು. ಹಲ್ಲೆಯಿಂದ ವಿಪರೀತ ನೋವು ಕಾಣಿಸಿಕೊಂಡಿರುವುದರಿಂದ ಶಿರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್‍ನಲ್ಲಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ವೈದ್ಯರು ಪರೀಕ್ಷಿಸಿ ಒಳರೋಗಿಯಾಗಿ ದಾಖಲು ಮಾಡಿಕೊಂಡಿದ್ದಾರೆ¿¿ ಎಂದು ಜೋಯ್ ವಿ.ಡಿ.ಯವರು ಉಪ್ಪಿನಂಗಡಿ ಪೆÇಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ದೂರಿನಂತೆ ಆರೋಪಿಗಳ ವಿರುದ್ಧ ಕಲಂ 323, 324, 427, 504, 506 ಜೊತೆಗೆ 34 ಐಪಿಸಿಯಂತೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here