




ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೂತನವಾಗಿ ಪ್ರಾರಂಭವಾಗಲಿರುವ ಮೆಸ್ಕಾಂ ಸಬ್ ಸ್ಟೇಷನ್ ಹಾಗೂ ಶಾಖಾ ಕಚೇರಿ ಮತ್ತು ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಮುಖ ರಸ್ತೆಗಳ ಅಭಿವೃದ್ಧಿಯ ಕುರಿತು ಕೇಂದ್ರದ ರಾಜ್ಯ ಖಾತೆ ಸಚಿವರಾದ ಶೋಭಾ ಕರಂದ್ಲಾಜೆಯವರನ್ನು ಬೆಂಗಳೂರಿನ ಅವರ ಕಛೇರಿಯಲ್ಲಿ ಬೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ.










ಈ ಸಂದರ್ಭದಲ್ಲಿ ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಕಾಣಿಯೂರು ಗ್ರಾ. ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ, ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ವಸಂತ ದಲಾರಿ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.








