ಈದ್ ಮೀಲಾದ್ ಹಬ್ಬದ ಹಿನ್ನೆಲೆ : ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

0

ಬೆಳ್ಳಾರೆ : ಈದ್ ಮೀಲಾದ್ ಹಬ್ಬದ ಹಿನ್ನೆಲೆ ಬೆಳ್ಳಾರೆ ಪೋಲಿಸ್ ಠಾಣಾ ವತಿಯಿಂದ ಶುಕ್ರವಾರ ಶಾಂತಿಸಭೆ ನಡೆಯಿತು. ಬೆಳ್ಳಾರೆ ಪೋಲಿಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಸುಹಾಸ್ ರವರ ನೇತೃತ್ವದಲ್ಲಿ ಸಭೆ ನಡೆಯಿತು.

ಶಾಂತಿಯುತವಾಗಿ ಹಬ್ಬವನ್ನು ಆಚರಿಸಿ, ಹಬ್ಬ ಯಶಸ್ವಿಯಾಗಿ ನಡೆಯಲಿ ಎಂದು ಎಸ್.ಐ. ಸುಹಾಸ್ ಹೇಳಿದರು. ಹಬ್ಬದ ಸಂದರ್ಭದಲ್ಲಿ ಯಾವುದಾದರೂ ಅಹಿತಕರ ಘಟನೆ ತಕ್ಷಣ ಠಾಣೆಗೆ ಮಾಹಿತಿ ನೀಡಿ ಸಹಕರಿಸಿ ಎಂದರು.ಸಭೆಯಲ್ಲಿ ಬೆಳ್ಳಾರೆ ಠಾಣಾ ವ್ಯಾಪ್ತಿಗೆ ಒಳಪಟ್ಟ ಮಸೀದಿಯ ಪ್ರಮುಖರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here