ಪುತ್ತೂರು : ಬೀದರ್ನಲ್ಲಿ ನಡೆದ ವಿದ್ಯಾಭಾರತಿ ಪ್ರಾಂತ ಹಾಗೂ ಕ್ಷೇತ್ರ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದೆ. ರಾಷ್ಟ್ರ ಮಟ್ಟದ ಪಂದ್ಯ ಮಧ್ಯಪ್ರದೇಶದಲ್ಲಿ ನಡೆಯಲಿದೆ.
ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ನಿತಿನ್ ಕುಮಾರ್, ವಾಣಿಜ್ಯ ವಿಭಾಗದ ಎಚ್ ಅಭಿರಾಮ್, ವಿಜ್ಞಾನ ವಿಭಾಗದ ಮಂಜುನಾಥ್ ಎಸ್, ಸಾತ್ವಿಕ್ ಆರ್, ನಂದನ್ ಗೌಡ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವರುಣ್ ಕುಮಾರ್, ಜೀವನ್ ಎಸ್, ದೇಶಿಕ್ ಕೆ, ರಂಜನ್ ಕೆ.ಆರ್, ವಿಜ್ಞಾನ ವಿಭಾಗದ ಎಲ್. ಧನುಷ್. ಅಶ್ವಿತ್ ಭಂಡಾರಿ, ಮನ್ವಿತ್ ಬಿ ಗೌಡ, ಯಶವಂತ್ ಡಿ.ಎಸ್, ಶ್ರೇಯಸ್ ಪಿ, ಸುಹಾಸ್ ಕೆ ಭಾಗವಹಿಸಿದ್ದರು.
ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ದಿವ್ಯ ಎಂ, ವಾಣಿಜ್ಯ ವಿಭಾಗದ ಜ್ಯೋತಿಕಾ ಪಿ, ಹಿತಶ್ರೀ, ಸುಪ್ರಿತಾ ಕೆ ವಿಜ್ಞಾನ ವಿಭಾಗದ ಪೂರ್ವಿಕ ಎ. ಎಸ್, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ದಿಶಾ ವಿ, ಯಶಸ್ವಿನಿ, ನಿಶ್ಮಿತಾ, ಕಲಾ ವಿಭಾಗದ ಶಿವಾನಿ ಪಿ.ಕೆ ಭಾಗವಹಿಸಿದ್ದರು.
ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ರವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.