ವಿಟ್ಲ: ಮೂರ್ಜೆ (ಮೂರ್ಕಜೆ) ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ವತಿಯಿಂದ ಅ.22ರಂದು ವಿಟ್ಲ ಅಕ್ಷಯ ಸಭಾಭವನದಲ್ಲಿ ಗುರುವಂದನಾ – ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟಿ ರಾಧಾಕೃಷ್ಣ ಪಿ. ಎಂ. ಮೂರ್ಜೆ ಹೇಳಿದರು.
ಅವರು ಅ.11ರಂದು ವಿಟ್ಲದ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕುಟುಂಬದ ಎಲ್ಲಾ ವಿಭಾಗದ ವತಿಯಿಂದ ಪ್ರಾತಃಕಾಲ 7 ರಿಂದ ಗಣಪತಿ ಹವನ ಹಾಗೂ ಶ್ರೀ ಸತ್ಯನಾರಾಯಣ ಪೂಜೆ ಹಾಗೂ10.30 ರಿಂದ ಶ್ರೀ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. ಶ್ರೀ ಆದಿಚುಂಚನಗಿರಿ ಕವೂರು ಶಾಖಾಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಮೂರ್ಜೆ ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟ್ ಅಧ್ಯಕ್ಷ ಕೆ.ಎಸ್ ಗೋಪಾಲಕೃಷ್ಣ ಗೌಡ ವಹಿಸಲಿದ್ದಾರೆ.
ಈ ಸಮಾರಂಭದಲ್ಲಿ ಮಾಜಿ ಮುಖ್ಯ ಮಂತ್ರಿ ಡಿ.ವಿ ಸದಾನಂದ ಗೌಡ, ಶಾಸಕ ಸಂಜೀವ ಮಠಂದೂರು, ಸುಳಯ ಲಿಬರಲ್ ಆಫ್ ಅಕಾಡೆಮಿ ಅಧ್ಯಕ್ಷ ಡಾ. ಕೆ.ವಿ ಚಿದಾನಂದ, ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ. ಕೆ.ವಿ ರೇಣುಕಾಪ್ರಸಾದ್, ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಬಿ.ಜಯಪ್ರಕಾಶ್ ಗೌಡ, ದೈವಜ್ಞ ಶಶಿಧರನ್ ಮಾಂಗಾಡು, ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಮ್ ಸುಳ್ಳಿ, ಕೆ.ಎಫ್.ಡಿ.ಸಿ. ಅಧ್ಯಕ್ಷ ಎ. ವಿ. ತೀರ್ಥರಾಮ ಅಂಬೆಕಲ್ಲು, ವಿಟ್ಲ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಮೋಹನ ಗೌಡ ಕಾಯರ್ಮಾರ್, ವಿಟ್ಲ ಕೃಷ್ಣಯ್ಯ ಕೆ. ಭಾಗವಹಿಸಿಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮೂರ್ಜೆ ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟ್ ಅಧ್ಯಕ್ಷ ಕೆ.ಎಸ್ ಗೋಪಾಲಕೃಷ್ಣ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ ಮೂರ್ಜೆ, ಉಪಾಧ್ಯಕ್ಷ ನವೀನ ಮುರೂರು, ಸಂಘಟನಾ ಕಾರ್ಯದರ್ಶಿ ಕೆ. ಎಂ. ಕೇಶವ ಉಪಸ್ಥಿತರಿದ್ದು.