ರಾಜ್ಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಸನ್ಮಯ ತೃತೀಯ

0

ಪುತ್ತೂರು:ಅ.11 ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 19 ವರ್ಷ ವಯೋಮಿತಿ ಒಳಗಿನ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸನ್ಮಯ ತೃತೀಯ ಸ್ಥಾನ ಗಳಿಸಿದ್ದಾರೆ.

ಈಕೆ ಕನ್ಯಾನದ ಈಶ್ವರ ಪ್ರಸಾದ್ ಮತ್ತು ಮಧುರಾ ದಂಪತಿ ಪುತ್ರಿ.ವಿದ್ಯಾರ್ಥಿನಿಯ ಸಾಧನೆಗೆಕಾ ಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here