ಪುತ್ತೂರು: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಿರ್ಮಿಸಲಾಗಿರುವ ಮಹಾಕಾಲ್ ಕಾರಿಡಾರ್ ನ್ನು : ಪ್ರಧಾನ ಮಂತ್ರಿಯಾದ ಶ್ರೀ ನರೇಂದ್ರ ಮೋದಿಯವರು ಅ.11 ರಂದು ಸಂಜೆ ಲೋಕಾರ್ಪಣೆ ಮಾಡುವ ಕಾರ್ಯಕ್ರಮದ ನೇರಪ್ರಸಾರವನ್ನು ಎಲ್ ಇ ಡಿ ಪರದೆ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ವೀಕ್ಷಣೆ ಮಾಡಲಾಯಿತು.
ಶ್ತೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿರುವ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ದೀಪಪ್ರಜ್ವಲನೆ ಮಾಡಿದರು. ಈ ಸಂದದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮದಾಸ್ ಗೌಡ, ಶೇಖರ್ ನಾರಾವಿ, ಬಿ ಐತ್ತಪ್ಪ ನಾಯ್ಕ್, ಡಾ.ಸುಧಾ ಎಸ್ ರಾವ್, ವೀಣಾ ಬಿ ಕೆ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ,ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ರಾವ್ ಬಪ್ಪಳಿಗೆ, ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಶಾಂತಿವನ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ಹರಿಪ್ರಸಾದ್ ಯಾದವ್, ನಗರಸಭೆ ಸದಸ್ಯರಾದ ಶಿವರಾಮ ಸಪಲ್ಯ, ಶೀನಪ್ಪ ನಾಯ್ಕ್, ಮನೋಹರ್ ಕಲ್ಲಾರೆ, ಪದ್ಮನಾಭ ನಾಯ್ಕ, ಗೌರಿ ಬನ್ನೂರು, ಮಾಜಿ ಸದಸ್ಯೆ ಜ್ಯೋತಿ ಆರ್ ನಾಯಕ್, ಗ್ರಾ.ಪಂ ಉಪಾಧ್ಯಕ್ಷ ಸುಧಾಕರ್ ರೈ, ಇಂದುಶೇಖರ್, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು, ರಾಧಾಕೃಷ್ಣ ನಂದಿಲ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.
Home ಚಿತ್ರ ವರದಿ ಉಜ್ಜಯಿನಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯಿಂದ ಮಹಾಕಾಲ್ ಕಾರಿಡಾರ್ ಲೋಕಾರ್ಪಣೆ – ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ...